Advertisement

ಕಂದಾಯ ಭವನದಲ್ಲಿ ಇವಿಎಂ ಪ್ರಾತ್ಯಕ್ಷಿಕೆ

12:22 PM Mar 06, 2018 | Team Udayavani |

ಬೆಂಗಳೂರು: ಇವಿಎಂಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗಾಗಿ ಕಂದಾಯ ಭವನದಲ್ಲಿ ಸೋಮವಾರ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಳಕೆಯಾಗಲಿರುವ, ಗುಜರಾತಿನಿಂದ ತರಿಸಿಕೊಂಡ 3,100 ಇವಿಎಂಗಳನ್ನು ಕಂದಾಯ ಭವನದಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ.

Advertisement

ಸೋಮವಾರ ಬೆಂಗಳೂರು ನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾತ್ಯಕ್ಷಿಕೆ ವೇಳೆ ಇವಿಎಂ ಯಾವ ರೀತಿ ಕೆಲಸ ಮಾಡುತ್ತದೆ,

ಅದರ ವಿನ್ಯಾಸ ಹೇಗಿರುತ್ತದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಅನುಮಾನಗಳಿಗೂ ಅಧಿಕಾರಿಗಳು ವಿವರಣೆ ನೀಡಿದರು. ಹಾಗೇ ಇವಿಎಂಗಳಲ್ಲಿರುವ ಹಳೆಯ ಮಾಹಿತಿ ಹಾಗೂ ದತ್ತಾಂಶ ಅಳಿಸುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next