Advertisement

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

11:38 PM Nov 24, 2024 | Team Udayavani |

ರಾಯಚೂರು: ದಿಲ್ಲಿಯ ಆರೆಸ್ಸೆಸ್‌ ಕಚೇರಿಯಲ್ಲಿ ಎರಡು ಸಾವಿರಕ್ಕೂ ಅ ಧಿಕ ಜನ ಕೆಲಸ ಮಾಡುತ್ತಿದ್ದು, ಅವರಲ್ಲಿ ಸಾಕಷ್ಟು ಜನ ಸಾಫ್ಟ್‌ವೇರ್‌ ಎಂಜಿನಿಯರ್‌ಗಳಿದ್ದಾರೆ. ಅವರ ಮೂಲಕ ಬಿಜೆಪಿ ನಾಯಕರು ಇವಿಎಂಗಳನ್ನು ತಮಗೆ ಬೇಕಾದ ರೀತಿಯಲ್ಲಿ ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎ. ವಸಂತ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

Advertisement

ಬಿಜೆಪಿಗೆ ಸಿಕ್ಕ ಜಯ ಅವರ ಸಾಧನೆಯಿಂದಲ್ಲ. ದೊಡ್ಡ ರಾಜ್ಯಗಳಲ್ಲಿ ಇವಿಎಂಗಳನ್ನು ದುರ್ಬಳಕೆ ಮಾಡಿಕೊಂಡು ಗೆಲುವು ಸಾಧಿ ಸುತ್ತಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲೂ ಇದನ್ನೇ ಮಾಡಿದ್ದಾರೆ. ಈಗ ಮಹಾರಾಷ್ಟ್ರದಲ್ಲೂ ಇವಿಎಂ ದುರ್ಬಳಕೆ ಮಾಡಿರುವ ಶಂಕೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next