Advertisement

ಇವಿಎಂ-ವಿವಿ ಪ್ಯಾಟ್‌ ಜಾಗೃತಿ ಕಾರ್ಯಾಗಾರ

04:07 PM Mar 23, 2018 | |

ಬೀದರ: ಜಿಲ್ಲೆಯ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಮಾಧ್ಯಮ ಪ್ರತಿನಿಧಿ ಗಳಿಗಾಗಿ ಮತಯಂತ್ರ (ಇವಿಎಂ) ಹಾಗೂ ಮತದಾನ ಖಾತ್ರಿ ಯಂತ್ರ (ವಿವಿ ಪ್ಯಾಟ್‌) ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರ ಗುರುವಾರ ನಗರದ ಎಸ್‌ಆರ್‌ಎಸ್‌ ಪಂಕ್ಷನ್‌ ಹಾಲ್‌ನಲ್ಲಿ ನಡೆಯಿತು.

Advertisement

ಮತದಾನದ ಪ್ರಕ್ರಿಯೆ ಹಾಗೂ ಮತದಾನ ಯಂತ್ರಗಳ ಬಳಕೆಯನ್ನು ಹೇಗೆ ಮಾಡಬೇಕು ಎಂಬುದರ ಕುರಿತು ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಈ ಕಾರ್ಯಾಗಾರಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಕೂಡ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ತಿಳಿಸಿದರು.

ಬಳಿಕ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಮತಯಂತ್ರ ಹಾಗೂ ಮತದಾನ ಖಾತ್ರಿ ಯಂತ್ರದ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಜಿಲ್ಲೆಗೆ ಈಗಾಗಲೇ ಬಂದಿರುವ ಬ್ಯಾಲೇಟ್‌ ಪೇಪರ್‌ಗಳು, ಕಂಟ್ರೋಲ್‌ ಯೂನಿಟ್‌ ಗಳು, ವಿವಿಪ್ಯಾಟ್‌ಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ವಿವಿ ಪ್ಯಾಟ್‌ಗಳನ್ನು ಬಳಸುತ್ತಿರುವುದರಿಂದ ಈ ಬಾರಿ ಮತದಾನದ ಅವಧಿಯನ್ನು ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,540 ಮತ ಕೇಂದ್ರಗಳಿವೆ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಪ್ರತಿನಿಧಿ ಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌. ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಹಾಗೂ ಇತರೆ ಸಿಬ್ಬಂದಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next