Advertisement

ಇವಿಎಂ, ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ

07:23 AM Mar 20, 2019 | |

ಮೈಸೂರು: ಮೈಸೂರು ತಾಲೂಕು ಸ್ವೀಪ್‌ ಸಮಿತಿ ವತಿಯಿಂದ ತಾಲೂಕಿನ ವಿವಿಧೆಡೆ ವಿದ್ಯುನ್ಮಾನ ಮತಯಂತ್ರಗಳಾದ ಇವಿಎಂ ಮತ್ತು ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ನೀಡುವ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು ಎಂದು ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಕೃಷ್ಣ ತಿಳಿಸಿದರು.

Advertisement

ಸೋಮವಾರ ಮೈಸೂರು ತಾಲ್ಲೂಕಿನ ಕಡಕೊಳ ಮತ್ತು ದೊಡ್ಡ ಮಾರಗೌಡನಹಳ್ಳಿ ಗ್ರಾಮ ಪಂಚಾಯತಿ ಹಾಗೂ ಮಾಣಿಕ್ಯಪುರ, ಶೆಟ್ಟನಾಯಕನಹಳ್ಳಿ, ವರಕೋಡು, ಕಟ್ಟೆಹುಂಡಿ, ಮಾರ್ಬಹಳ್ಳಿ ಹುಂಡಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ನೀಡಿ ಏಪ್ರಿಲ್‌ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ನಾಗರಿಕರಿಗೆ ಅರಿವು ಮೂಡಿಸಲಾಯಿತು.

ಅಣಕು ಮತದಾನ: ಸೆಕ್ಟರ್‌ 14ರ ವ್ಯಾಪ್ತಿಯ ಬೋಗಾದಿ ಮರಿಯಾನಿಕೇತನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್‌ ಸಂಖ್ಯೆ 150 ಮತ್ತು 151ರಲ್ಲಿ ಮತದಾರರಿಗೆ ಅಣಕು ಮತದಾನ ಮಾಡಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನದ ಮಾಡುವ ಬಗ್ಗೆ ನಾಗರಿಕರಿಗೆ ಮನವರಿಕೆ ಮಾಡಿಕೊಡಲಾಯಿತು.

ಮತ ಮಾರಿಕೊಳ್ಳಬೇಡಿ: ಈ ಎಲ್ಲಾ ಗ್ರಾಮಗಳಲ್ಲಿಯೂ ಮತದಾರರಿಗೆ ಚುನವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಮಾರಾಟಕ್ಕಿಡದೆ ಪ್ರಜಾಪ್ರಭುತ್ವದ ಆಶಯಗಳನ್ನು ಕಾಪಾಡುವ ಪ್ರಾಮಾಣಿಕ ವ್ಯಕ್ತಿಗಳನ್ನು ಆಯ್ಕೆ ಮಾಡಲು ತಪ್ಪದೇ ಮತದಾನ ಮಾಡಬೇಕು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next