Advertisement

ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಉಪಯೋಗಿಸಲ್ಲ: ಚುನಾವಣಾ ಆಯೋಗ

08:32 AM Feb 13, 2020 | Nagendra Trasi |

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ವನ್ನು ತಿರುಚಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಉಪಯೋಗಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಚುನಾವಣಾ ಕಮಿಷನರ್ ಸುನೀಲ್ ಆರೋರಾ ಬುಧವಾರ ಸ್ಪಷ್ಟಪಡಿಸಿದ್ದಾರೆ.

Advertisement

ಮುಂಬರುವ ದಿನಗಳಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಜತೆ ವಿವಿಧ ಚುನಾವಣಾ ಸುಧಾರಣೆ ಮತ್ತು ನೀತಿ ಸಂಹಿತೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅವರು ಟೈಮ್ಸ್ ನೌ ಶೃಂಗವನ್ನು ಉದ್ದೇಶಿಸಿ ಮಾತನಾಡುತ್ತ, ಇವಿಎಂ ಅನ್ನು ಕಾರು ಅಥವಾ ಪೆನ್ನಿನ ರೀತಿ ಬೇಕಾದಂತೆ ತಿರುಚಲು (ಬದಲಾಯಿಸಲು) ಸಾಧ್ಯವಿಲ್ಲ. ಹಾಲಿ ಇರುವ ಇವಿಎಂಗಳನ್ನು ಇನ್ನು 20 ವರ್ಷಗಳ ಕಾಲ ಬಳಸಬಹುದಾಗಿದೆ. ಅಲ್ಲದೇ ಮತ್ತೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next