Advertisement

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

08:41 PM Apr 26, 2024 | Team Udayavani |

ಚಾಮರಾಜನಗರ : ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಬೇಕೋ ಬೇಡವೋ ಎಂಬ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನೇ ಧ್ವಂಸಗೊಳಿಸಲಾಗಿದೆ.

Advertisement

ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟುಕೊಂಡು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಹಿಂದಿನ ದಿನ ನಿರ್ಧರಿಸಿದ್ದರು. ಆದಾಗ್ಯೂ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ, ಮತದಾನ ಆರಂಭವಾಗಿತ್ತು. ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಬದ್ದವಾಗಿತ್ತು. ಈ ವೇಳೆ ವಾಗ್ವಾದ ನಡೆದು ಇವಿಎಂಗಳನ್ನು ಧ್ವಂಸಗೊಳಿಸಿ, ಕಲ್ಲು ತೂರಾಟ ನಡೆಸಿ ಮತಗಟ್ಟೆಯೊಳಗಿದ್ದ ಎಲ್ಲ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿದ್ದಾರೆ.

ಗ್ರಾಮಸ್ಥರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು, ದಾಂಧಲೆ ನಡೆಸಿದವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿ – ರಸ್ತೆಗಳು – ಸರಿಯಿಲ್ಲ ಎಂದು ಅವರು ದೂರಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ.

“ಇವಿಎಂಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರಿಂದ ಯಾವುದೇ ಗಾಯವಾಗಲಿಲ್ಲ. ಸ್ಥಳದಲ್ಲಿದ್ದ ಪೊಲೀಸರು ಉದ್ರಿಕ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಈ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದ್ದು ವಿವರವಾದ ವರದಿ ಪಡೆದು ಚುನಾವಣ ಆಯೋಗ ಕ್ರಮ ಕೈಗೊಳ್ಳಲಿದೆ.ಘಟನೆಯಲ್ಲಿ ಭಾಗಿಯಾದವರು ಪರಾರಿಯಾಗಿದ್ದು, ಪೊಲೀಸರು ಅವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next