ನವದೆಹಲಿ: 1995ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
1995ರಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು 2008ರಲ್ಲಿ ಪಾಟ್ನಾ ಹೈ ಕೋರ್ಟ್ ಖುಲಾಸೆಗೊಳಿಸಿತ್ತು.
ಆಗಸ್ಟ್ 18 ರಂದು, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಸಿಂಗ್ ಅವರನ್ನು ಅಪರಾಧಿ ಎಂದು ಘೋಷಿಸಿತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸುವುದಾಗಿ ಹೇಳಿತ್ತು.
ಅದರಂತೆ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್, ಎರಡೂ ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಸೂಚಿಸಿದೆ.
ಇದನ್ನೂ ಓದಿ: One Nation, One Election ಸ್ವಾಗತಿಸಿದ ಕಾಂಗ್ರೆಸ್ ನಾಯಕ ಟಿ.ಎಸ್.ಸಿಂಗ್ ದಿಯೋ