Advertisement

ಭಾರತ್ ಬ್ಯಾಂಕ್ ಮಾಜಿ ಅಧ್ಯಕ್ಷ ಜಯ ಸಿ ಸುವರ್ಣ ನಿಧನ

12:10 PM Oct 21, 2020 | keerthan |

ಉಡುಪಿ: ಭಾರತ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಸ್ಥಾಪಕ ಜಯ ಸಿ ಸುವರ್ಣ (74) ಅವರು ಅ. 21ರಂದು ಮುಂಜಾನೆ ಮುಂಬಯಿಯಲ್ಲಿ ನಿಧನ ಹೊಂದಿದರು.

Advertisement

ಭಾರತ್ ಬ್ಯಾಂಕ್ ಲಿ. ನ ಅಧ್ಯಕ್ಷರು, ನಾರಾಯಣ ಗುರು ಅರ್ಬನ್ ಕೋ.  ಆಪರೇಟಿವ್ ಬ್ಯಾಂಕ್ ನ ಪ್ರವರ್ತಕರಾಗಿದ್ದ ಅವರು, ಜನಾರ್ದನ ಪೂಜಾರಿಯವರ ನಿಕಟವರ್ತಿ, ದೇಶ ವಿದೇಶಗಳಲ್ಲಿ ಎಲ್ಲಾ ಜಾತಿಯ ಸಂಘ ಸಂಸ್ಥೆಗಳಲ್ಲಿ ಉತ್ತಮ ಭಾಂದವ್ಯ ಹೊಂದಿದ್ದರು.

ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರುವಾರಿಯಾಗಿದ್ದ ಅವರು ಆಡಳಿತ ಸಮಿತಿ ಗೌರವಾಧ್ಯಕ್ಷರಾಗಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಗೌರವಾಧ್ಯಕ್ಷರಾಗಿ, ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃವಾಗಿದ್ದರು.

ಇದನ್ನೂ ಓದಿ:ತರಕಾರಿ ವ್ಯಾಪಾರ ಯುವಕನ ಬದುಕು ಬದಲಿಸಿತು

‌‌ಮೃತರು ಪತ್ನಿ ಲೀಲಾವತಿ ಜಯ ಸುವರ್ಣ, ಮಕ್ಕಳಾದ ಸೂರ್ಯಕಾಂತ್ ಜೆ. ಸುವರ್ಣ, ಸುಭಾಶ್ ಜೆ. ಸುವರ್ಣ, ದಿನೇಶ್ ಜೆ. ಸುವರ್ಣ, ಯೋಗೇಶ್ ಜೆ. ಸುವರ್ಣ ಅವರನ್ನು ಅಗಲಿದ್ದಾರೆ.

Advertisement

ಅವರ ನಿಧನಕ್ಕೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನಿರ್ಮಾತೃ , ಮಾಜಿ ಕೇಂದ್ರ ಸಚಿವ ಬಿ.‌ಜನಾರ್ದನ ಪೂಜಾರಿ, ಆಡಳಿತ ಮಂಡಳಿ ಅಧ್ಯಕ್ಷ ಎಚ್. ಸಾಯಿರಾಮ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಮುಂಬಯಿ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಮಾಜಿ ಅಧ್ಯಕ್ಷರಾದ ಎಲ್.ವಿ. ಅಮೀನ್, ನಿತ್ಯಾನಂದ ಕೋಟ್ಯಾನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ .ರಾಜಶೇಖರ ಕೋಟ್ಯಾನ್, ಭಾರತ್ ಬ್ಯಾಂಕ್ ನ ಅಧ್ಯಕ್ಷ ಉಪ್ಪೂರು ಶಿವಾಜಿ ಪೂಜಾರಿ, ನಾರಾಯಣ ಗುರು ಅರ್ಬನ್ ಕೋ. ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಹರೀಶ್ಚಂದ್ರ ಅಮೀನ್, ಸಮಾಜದ ವಿವಿಧ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next