Advertisement

ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿ ಹೊಂದಿದ ಬಜೆಟ್: ಬಿಎಸ್.ಯಡಿಯೂರಪ್ಪ

01:56 PM Feb 01, 2022 | Team Udayavani |

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

2022-23ನೇ ಸಾಲಿನ ಕೇಂದ್ರ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಅವರು, ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದರು.

ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದರು.

ಇದನ್ನೂ ಓದಿ:ಕೇಂದ್ರ ಬಜೆಟ್ 2022-23: ಈ ಬಾರಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು ‘ಅಂತರಾಷ್ಟ್ರೀಯ ಸಿರಿಧಾನ್ಯ’ ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಬಿಎಸ್ ವೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಡಿಜಿಟಲ್ ಶಿಕ್ಷಣ ಕ್ರಾಂತಿ: ಏನಿದು ‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಯೋಜನೆ

ಇದನ್ನೂ ಓದಿ:ದೇಶದ ಐದು ನದಿ ಜೋಡಣೆಗೆ ಬಜೆಟ್ ನಲ್ಲಿ ಅಸ್ತು: 44,605 ಕೋಟಿ ರೂ ಅನುದಾನ

Advertisement

Udayavani is now on Telegram. Click here to join our channel and stay updated with the latest news.

Next