Advertisement

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯ

08:43 PM Mar 04, 2021 | Team Udayavani |

ಚಿಕ್ಕಬಳ್ಳಾಪುರ: ದೆಹಲಿಯ ಸರ್ಕಾರಿ ವಸತಿಗೃಹದಲ್ಲಿ ನಡೆದಿರುವುದು ಮಾನಗೆಟ್ಟ ಕೆಲಸ. ಸಚಿವರಾದವರು ಯಾರಾದರೂ ಇಂತಹ ಕೆಲಸ ಮಾಡುತ್ತಾರಾ ಎಂದು ರಮೇಶ್‌ ಜಾರಕಿಹೊಳಿ ರಾಸಲೀಲೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

Advertisement

ಕಂದವಾರ ಕೆರೆಯಲ್ಲಿ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಸಚಿವರಾಗಿ ಯಾರಾದರೂ ಇಂತಹ ಕೆಲಸ ಮಾಡುತ್ತಾರಾ? ಅದರಲ್ಲೂ ಸರ್ಕಾರಿ ವಸತಿ ಗೃಹ. ದೆಹಲಿಯ ಕರ್ನಾಟಕ ಭವನದಲ್ಲಿ ಈ ಘಟನೆ ನಡೆದಿದೆ. ಇಂತಹ ಅಸಹ್ಯ, ಅಶ್ಲೀಲವಾದದ್ದನ್ನು ನಾನು ಎಂದೂ ಕಂಡಿರಲಿಲ್ಲ. ರಮೇಶ್‌ ಜಾರಕಿಹೊಳಿ ಮಂಗಳವಾರವೇ ರಾಜೀನಾಮೆ ನೀಡಬೇಕಿತ್ತು ಒಂದು ದಿನ ತಡ, ವಿಳಂಬ ಮಾಡಿದ್ದೇ ತಪ್ಪು ಎಂದು ಹೇಳಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಳಿಸಲು 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡಿದ್ದೇವೆ. ಅದೇ ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸುವ 1200 ಕೋಟಿ ರೂ. ಗಳ ಎಚ್‌.ಎನ್‌.ವ್ಯಾಲಿ ಯೋಜನೆ ಜಾರಿಗೊಳಿಸಿದ ಫಲದಿಂದಾಗಿ ಕೆರೆಗಳಿಗೆ ನೀರು ಬಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆಂದರು. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಂಡರೆ ಈ ಭಾಗದ ಜನರಿಗೆ ಕುಡಿವ ನೀರು ಲಭ್ಯವಾಗಲಿದೆ ಎಂದರು.

ಈ ವೇಳೆ ಎಐಸಿಸಿ ಕಾರ್ಯದರ್ಶಿ ಮಧುಯಕ್ಷಿ ಗೌಡ, ಶಾಸಕರಾದ ಕೃಷ್ಣ ಬೈರೇಗೌಡ,  ಎನ್‌.ಎಚ್‌.ಶಿವಶಂಕರರೆಡ್ಡಿ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೇಶವರೆಡ್ಡಿ, ಯುವ ಕಾಂಗ್ರೆಸ್‌ ಮುಖಂಡ ನಲಪಾಡ್‌ ಮೊಹ್ಮದ್‌ ಹ್ಯಾರೀಸ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next