Advertisement

ಬಿಎಸ್ ವೈ ಬಗ್ಗೆ ಅನುಕಂಪವಿದೆ, ಅವರ ಮುಂದಿನ ಜೀವನ ಸುಖಕರವಾಗಿರಲಿ : ಮಾಜಿ ಸಿಎಂ ಸಿದ್ದು

03:28 PM Jul 26, 2021 | Team Udayavani |

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ವಿಚಾರ ಮುಂದಿಟ್ಟುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Advertisement

ಇಂದು (ಜು.26) ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪನವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ ಎಂದಿದ್ದಾರೆ.

ಬಿಎಸ್ ವೈ ರಾಜೀನಾಮೆ ನಿರೀಕ್ಷಿತವಾದುದು ಎಂದಿರುವ ಸಿದ್ದರಾಮಯ್ಯ, ಹಿಂದೆಯೇ ನಾನು ಹೇಳಿರುವುದು ನಿಜವಾಗಿದೆ. ಈ ಬಗ್ಗೆ ಸಂಭ್ರಮ ಪಡುವಂತಹದ್ದೇನೂ ಇಲ್ಲ. ಭ್ರಷ್ಟ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು. ಆ ದಿನಗಳು ಸದ್ಯದಲ್ಲಿಯೇ ಬರಲಿದೆ ಎಂದು ನುಡಿದಿದ್ದಾರೆ.  .

ಯಡಿಯೂರಪ್ಪನವರು ಹೋದರೂ, ಇನ್ನೊಬ್ಬರು ಬಂದರೂ ಅದರ ಭ್ರಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ ಎಂದು ಕುಟುಕಿದ್ದಾರೆ.

ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುವುದು ಪ್ರಜಾಪ್ರಭುತ್ವದ ರೂಢಿ. ಆದರೆ ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ. ಬಿಎಸ್ ವೈ ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಅವರ ಸರ್ಕಾರದ ಭ್ರಷ್ಟಾಚಾರವೇ?

Advertisement

BJP ಎಂದರೆ ‘ಭ್ರಷ್ಟಾಚಾರ ಜಾರಿ ಪಾರ್ಟಿ’. ಬಿಎಸ್ ವೈ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ. ‘ನಾ ಖಾವುಂಗಾ, ನಾ ಖಾನೆ ದೂಂಗಾ’ಎಂದು ಹೇಳುತ್ತಿರುವ ನರೇಂದ್ರ  ಅವರಿಗೆ  ಒಂದಿಷ್ಟು ಮರ್ಯಾದೆ ಇದ್ದರೆ, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next