ಮಹಾರಾಷ್ಟ್ರ: ಲೋಕಸಭೆಯ ಮಾಜಿ ಸ್ಪೀಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮನೋಹರ್ ಜೋಶಿ ಅವರನ್ನು ಸೋಮವಾರ ರಾತ್ರಿ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೋಶಿ ಅವರು ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದು ಮತ್ತು ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಹಿರಿಯ ವೈದ್ಯರ ತಂಡದಿಂದ ಜೋಶಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪತ್ನಿ ರಶ್ಮಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಶಿವಸೇನಾ ನಾಯಕನ ಆರೋಗ್ಯ ವಿಚಾರಿಸಿದರು.
1967 ರಲ್ಲಿ ರಾಜಕೀಯ ರಂಗಕ್ಕೆ ಪ್ರವೇಶಿಸಿದ ಜೋಶಿ 1995 ರಿಂದ 1999 ರವರೆಗೆ ಶಿವಸೇನೆ – ಬಿಜೆಪಿ ಒಕ್ಕೂಟದ ಅಡಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.
Related Articles
ಇದನ್ನೂ ಓದಿ: ಕೂಲಿ ಕಾರ್ಮಿಕನ ಮಗ UPSC ಪಾಸ್ : ಸರೂರು ತಾಂಡಾದ ಯಲಗೂರೇಶ ಸಾಧನೆ