Advertisement

ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ : ಮಾಜಿ ಸಚಿವ ಈಶ್ವರಪ್ಪ

11:55 AM Jul 30, 2021 | Team Udayavani |

ಮೈಸೂರು : ಮುಖ್ಯಮಂತ್ರಿ ಅಂತು ಮಾಡಲಿಲ್ಲ. ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

Advertisement

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿಯುತ್ತಿದ್ದೇನೆ. ಹೀಗಾಗಿ ನನ್ನನ್ನು ಮುಖ್ಯಮಂತ್ರಿ ಮಾಡಬಹುದು ಅಂತ ಬೆಂಬಲಿಗರು ನಿರೀಕ್ಷೆ ಮಾಡಿದ್ದರು. ಪಕ್ಷದ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದೆ. ಈಗ ಈಶ್ವರಪ್ಪ ಉಪಮುಖ್ಯಮಂತ್ರಿ ಆಗಲಿ ಅಂತ ಸ್ವಾಮಿಜಿಗಳು, ಬೆಂಬಲಿಗರು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನದ ಸರ್ಕಸ್: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಯಾದವಶ್ರೀ ಬ್ಯಾಟಿಂಗ್

ಹಿರಿತನ ಪರಿಗಣಿಸಿ ಉಪಮುಖ್ಯಮಂತ್ರಿ ಹುದ್ದೆ ನೀಡುವ ನಿರೀಕ್ಷೆ ಇದೆ. ಯಡಿಯೂರಪ್ಪ ನವರು ನಾಲ್ಕು ಬಾರಿ ಮುಖ್ಯಮಂತ್ರಿ ಆದರೂ, ಜನ ನಮಗೆ ಸ್ಪಷ್ಟ ಬಹುಮತ ಕೊಟ್ಟಿಲ್ಲ. ಆದರೇ, ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಕೆಲವು ಗೊಂದಲಗಳು ಇದ್ದದ್ದು ನಿಜ. ಆದರೇ ಬಿಜೆಪಿಯ ಎಲ್ಲಾ ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಬಹುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,  ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುವುದು ಹೈಕಮಾಂಡ್ ಗೆ ಗೊತ್ತಿದೆ. ನಮಲ್ಲಿ ಗೊಂದಲು ಬಗೆಹರಿದಿದೆ, ಈಗ ಕಾಂಗ್ರೆಸ್ ನಲ್ಲಿ ಶುರು ಹಾಗಿದೆ ಎಂದರು.

Advertisement

ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್, ತನ್ವೀರ್ ಸೇಠ್, ಎಂ.ಬಿ ಪಾಟೀಲ್ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡಿದ್ದಾರೆ. ಅವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂದು ಲೇವಡಿ ಮಾಡಿ, ಇವರಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಅಂತ ಅವರ ಹೈಕಮಾಂಡ್ ಘೋಷಿಸಲಿ ಎಂದು ಸವಾಲು ಹಾಕಿದ್ದಾರೆ‌.

ಇದನ್ನೂ ಓದಿ : ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next