Advertisement

Akola; ಕಾರು-ಬಸ್‌ ಢಿಕ್ಕಿ: ಮಾಜಿ ಶಾಸಕ ಸಹಿತ ಎಂಟು ಮಂದಿಗೆ ಗಾಯ

08:08 PM Oct 07, 2023 | Team Udayavani |

ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಮಾಜಿ ಶಾಸಕ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Advertisement

ಜಿಲ್ಲೆಯ ಕುರಂಖೇಡ್ ಗ್ರಾಮದ ಬಳಿ ಹೆದ್ದಾರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಲ್ಧಾನಾದ ಮಾಜಿ ಶಾಸಕ ವಿಜಯರಾಜ್ ಶಿಂಧೆ (58) ಅವರು ತಮ್ಮ ನಾಲ್ವರು ಬೆಂಬಲಿಗರೊಂದಿಗೆ ಅಮರಾವತಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಅಕೋಲಾಗೆ ಹೋಗುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮಾಜಿ ಶಾಸಕ, ಅವರ ಮೂವರು ಬೆಂಬಲಿಗರು ಮತ್ತು ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಅಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next