Advertisement

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ಫೋಟೋ ವೈರಲ್: ಈ ಬಗ್ಗೆ ಅವರು ಹೇಳಿದ್ದೇನು ?

04:29 PM Jul 23, 2022 | Team Udayavani |

ಕುಷ್ಟಗಿ (ದೋಟಿಹಾಳ): ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಈ ಬಗ್ಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ರಕರ್ತರ ಪ್ರಶ್ನೆಗೆ  ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕೊಪ್ಪಳದ ಕುಷ್ಟಗಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾತಾನಾಡಿದ ವಿಜಯಾನಂದ ಕಾಶಪ್ಪನವರ್ ,ಈ ಬಗ್ಗೆ ನನಗೇನೂ ಗೊತ್ತಿಲ್ಲ. ನನಗೆ ದಾಖಲೆ ಇದರೆ ಕೊಡಿ ಮಾತನಾಡುತ್ತೇನೆ, ಫೋಟೊ ವೈರಲ್ ಆಗಿರುವುದು ನನಗೆ ಗೊತ್ತಿಲ್ಲ ಎಂದಿದ್ದಾರೆ.

ಇಂಥಹ ಪೋಟೊ ವೈರಲ್ ಮಾಡುವುದೇ ಮಾಧ್ಯಮದವರ ಕೆಲಸ. ನಮ್ಮ ವಿರೋಧಿಗಳು ಇಂತಹ ಕೆಲಸ ಮಾಡುತ್ತಿರುತ್ತಾರೆ. ನಾನು ಇದಕ್ಕೆಲ್ಲ ಬಗ್ಗುವುದಿಲ್ಲ- ಜಗ್ಗುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಹೈಕಮಾಂಡ್ ಇದೆ. ಸಿಎಂ ಯಾರು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ಜಮೀರ್ ಅಹ್ಮದ್ ಹೇಳಿಕೆ ಅವರ ವೈಯಕ್ತಿಕ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next