ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
89 ವರ್ಷದ ಪ್ರತಿಭಾ ಪಾಟೀಲ್ ಅವರು ಜ್ವರ ಹಾಗೂ ಎದೆ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಬುಧವಾರ ಪುಣೆಯ ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಾ ಪಾಟೀಲ್ ಅವರು 2007 ರಿಂದ 2012 ರವರೆಗೆ ಭಾರತದ ಮೊದಲ ಮಹಿಳಾ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ ಅವರು ಭಾರತದ 12 ನೇ ರಾಷ್ಟ್ರಪತಿಯಾಗಿದ್ದರು.
ಅವರು ಈ ಹಿಂದೆ 1991 ರಿಂದ 1996 ರವರೆಗೆ ಮಹಾರಾಷ್ಟ್ರದ ಅಮರಾವತಿಯಿಂದ ಲೋಕಸಭೆಯ ಸಂಸದೆಯಾಗಿ ಸೇವೆ ಸಲ್ಲಿಸಿದರು ಮತ್ತು ನಂತರ 2004 ರಿಂದ 2007 ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.
ಇದನ್ನೂ ಓದಿ: Tragedy: ದೆಹಲಿಯ ವಸತಿ ಸಮುಚ್ಚಯದಲ್ಲಿ ಅಗ್ನಿ ದುರಂತ, ಮಕ್ಕಳು ಸೇರಿ ನಾಲ್ವರು ಸಜೀವ ದಹನ