ಚಂಡೀಗಢ: ಅಧಿಕಾರಿಯೊಬ್ಬರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಪಂಜಾಬ್ ಮಾಜಿ ಸಚಿವ ಸುಂದರ್ ಶಾಮ್ ಅರೋರಾ ಅವರನ್ನು ವಿಜಿಲೆನ್ಸ್ ಬ್ಯೂರೋ ರವಿವಾರ ಬಂಧಿಸಿದೆ.
ಅರೋರಾ ಅವರು ತನ್ನ ವಿರುದ್ಧದ ಪ್ರಕರಣವನ್ನು ಇತ್ಯರ್ಥಗೊಳಿಸಲು ಎಐಜಿ ಮನಮೋಹನ್ ಕುಮಾರ್ ಅವರಿಗೆ ಐವತ್ತು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದರು ಈ ವೇಳೆ ವಿಜಿಲೆನ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ವಿಜಿಲೆನ್ಸ್ ತನಿಖೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದ್ದು, ಮಾಜಿ ಸಚಿವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯಿಂದ 50 ಲಕ್ಷ ರೂಪಾಯಿ ಲಂಚ ವಸೂಲಿ ಮಾಡಲಾಗಿದೆ ಎಂದು ಪಂಜಾಬ್ ವಿಜಿಲೆನ್ಸ್ ಬ್ಯೂರೋ ತಿಳಿಸಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಅರೋರಾ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ಯರ್ಥಪಡಿಸಲು ಲಂಚ ನೀಡುತ್ತಿದ್ದರು ಎನ್ನಲಾಗಿದೆ.
ಬಂಧಿತ ಮಾಜಿ ಸಚಿವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಒಳಪಡಿಸಲಿದ್ದೇವೆ ಎಂದು ವಿಜಿಲೆನ್ಸ್ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : ಅಪಘಾತದ ಗಾಯಾಳುವಿಗೆ ಕಾರು ನೀಡಿ ಬೈಕಲ್ಲಿ ತೆರಳಿದ ಸಚಿವ ಸುನಿಲ್