Advertisement
ಇದನ್ನೂ ಓದಿ:ವರ್ಷಾಂತ್ಯಕ್ಕೆ ‘ಕೆಜಿಎಫ್ 3’ ಶೂಟಿಂಗ್ ಆರಂಭ; ಮಹತ್ವದ ಮಾಹಿತಿ ನೀಡಿದ ವಿಜಯ್ ಕಿರಗಂದೂರು
Related Articles
Advertisement
ಶಶಿಕುಮಾರ್ ಶಿಕ್ಷಕನಾಗಿದ್ದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದಾರೆ. ಕೆವಿ ಶಶಿಕುಮಾರ್ ಸಿಪಿಎಂ ಮುಖಂಡನಾಗಿದ್ದು, ಮಲಪ್ಪುರಂ ಪುರಸಭೆಗೆ ಮೂರು ಬಾರಿ ಸದಸ್ಯನಾಗಿ ಆಯ್ಕೆಯಾಗಿದ್ದ.
ಶಶಿಕುಮಾರ್ 2022ರ ಮಾರ್ಚ್ ನಲ್ಲಿ ಸೈಂಟ್ ಜೆಮ್ಮಾಸ್ ಹುಡುಗಿಯರ ಹೈಸ್ಕೂಲ್ ನಿಂದ ನಿವೃತ್ತಿಯಾಗಿದ್ದ. ತಾನು ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾಗಿರುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ ನಂತರ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘ ಈ ಆರೋಪ ಮಾಡಿರುವುದಾಗಿ ವರದಿ ವಿವರಿಸಿದೆ.
ಪೊಲೀಸ್ ಠಾಣೆಯಲ್ಲಿ ಹಲವಾರು ದೂರು ದಾಖಲಾದ ನಂತರ ಶಶಿಕುಮಾರ್ ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ. ಹಳೆ ವಿದ್ಯಾರ್ಥಿಗಳ ಸಂಘದ ಪ್ರಕಾರ, 2019ರಲ್ಲಿಯೇ ಶಶಿಕುಮಾರ್ ವಿರುದ್ಧ ಕೆಲವು ವಿದ್ಯಾರ್ಥಿನಿಯರು ದೂರು ನೀಡಿದ್ದರು ಕೂಡಾ ಶಾಲಾ ಆಡಳಿತ ಮಂಡಳಿ ಯಾವ ಕ್ರಮ ತೆಗೆದುಕೊಂಡಿರಲಿಲ್ಲವಾಗಿತ್ತು.
ನಂತರ ಹಳೆ ವಿದ್ಯಾರ್ಥಿಗಳ ಸಂಘದ ಮೂಲಕ ಲೈಂಗಿಕ ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯರು ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಿಪಿಎಂ(ಎಂ) ಶಶಿಕುಮಾರ್ ನನ್ನು ಪಕ್ಷದಿಂದ ಉಚ್ಚಾಟಿಸಿರುವುದಾಗಿ ವರದಿ ತಿಳಿಸಿದೆ.