Advertisement

ಗುಜರಾತ್: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಹೆಸರು ಘೋಷಣೆ: ಯಾರಿವರು ಇಸುದಾನ್ ಗಢ್ವಿ?

02:48 PM Nov 04, 2022 | Team Udayavani |

ಗಾಂಧಿನಗರ(ಗುಜರಾತ್): ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಇಸುದಾನ್ ಗಢ್ವಿ ಅವರನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಶುಕ್ರವಾರ (ನವೆಂಬರ್ 04) ಘೋಷಿಸಲಾಗಿದೆ.

Advertisement

ಇದನ್ನೂ ಓದಿ:ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು: ಡಿ.ಕೆ.ಶಿವಕುಮಾರ್

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿದರು.

ಯಾರೀತ ಗಢ್ವಿ:

ಇಸುದಾನ್ ಗಢ್ವಿ ಮಾಜಿ ಪತ್ರಕರ್ತ ಮತ್ತು ಟಿವಿ ಆ್ಯಂಕರ್. ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಆಪ್ ಮತದಾರರಿಂದ ದೂರವಾಣಿಯಲ್ಲಿ ಅಭಿಪ್ರಾಯ ಸಂಗ್ರಹಿಸಿತ್ತು. ಗುರುವಾರ ಸಂಜೆ 5ಗಂಟೆಗೆ ಮತದಾನ ಮುಕ್ತಾಯವಾಗಿದ್ದು, ಇಸುದಾನ್ ಶೇ.73ರಷ್ಟು ಮತ ಪಡೆದು ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

Advertisement

ಈ ಹಿಂದೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷ ವೋಟಿಂಗ್ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ಆಯ್ಕೆ ಮಾಡಿತ್ತು. ಇಸುದಾನ್ ಗಢ್ವಿ ಕಳೆದ ವರ್ಷ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಆಮ್ ಆದ್ಮಿ ಪಕ್ಷದ ಗುಜರಾತ್ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯ ರೇಸ್ ನಲ್ಲಿದ್ದರು. ಆದರೆ ಗಢ್ವಿ ಸಮೀಕ್ಷೆಯಲ್ಲಿ ಹೆಚ್ಚು ಮತಗಳಿಸುವ ಮೂಲಕ ಆಪ್ ನ ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next