ವಾಷಿಂಗ್ಟನ್ : ಯುಎಸ್ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಸೋಮವಾರ(ಡಿ.೨೩) ಅರೋಗ್ಯ ಸಮಸ್ಯೆ ಹಿನ್ನೆಲೆ ವಾಷಿಂಗ್ಟನ್‌ನ ಆಸ್ಪತ್ರೆಗೆ ದಾಖಲಾಗಿದ್ದು ಸದ್ಯ ಅರೋಗ್ಯ ಸುಧಾರಿಸುತ್ತಿದೆ ಎಂದು ಉಪ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ಈ ಕುರಿತು X ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ಲಿಂಟನ್ ಅವರ ಉಪ ಮುಖ್ಯಸ್ಥ ಏಂಜೆಲ್ ಯುರೇನಾ ‘ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ಜ್ವರದಿಂದ ಬಳಲುತ್ತಿದ್ದು, ಅವರನ್ನು ಮೆಡ್‌ಸ್ಟಾರ್ ಜಾರ್ಜ್‌ಟೌನ್ ಯೂನಿವರ್ಸಿಟಿ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸುಧಾರಿಸುತ್ತಿದ್ದು ಮೊದಲಿನಂತೆ ಆರೋಗ್ಯಯುತವಾಗಿ ಇರಲಿದ್ದಾರೆ ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ
ಕ್ಲಿಂಟನ್ 1993 ರ ಜನವರಿಯಿಂದ 2001ರ ಜನವರಿವರೆಗೆ ಎರಡು ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಈ ವರ್ಷದ ಆರಂಭದಲ್ಲಿ, ಅವರು ಚಿಕಾಗೋದಲ್ಲಿ ನಡೆದ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ಕೂಡ ಭಾಗವಹಿಸಿದ್ದರು.
2004ರ ಉಸಿರಾಟ ಹಾಗೂ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೈಪಾಸ್ ಸರ್ಜರಿಗೆ ಒಳಗಾಗಿದ್ದರು.
ಇದನ್ನೂ ಓದಿ: Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು