ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ.
ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಮಾಜಿ ಮುಖ್ಯಮಂತ್ರಿ ರಾವತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಸದ್ಯ ಅವರ ಅರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಅಪಘಾತದ ಕುರಿತು ರಾವತ್ ಟ್ವಿಟರ್ X ನಲ್ಲಿ ಪೋಸ್ಟ್ ಹಾಕಿದ್ದು “ಹಲ್ದ್ವಾನಿಯಿಂದ ಕಾಶಿಪುರ್‌ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್‌ಪುರದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದೇನೆ. ನಾನು ಆಸ್ಪತ್ರೆಯಲ್ಲಿ ಅರೋಗ್ಯ ತಪಾಸಣೆ ಮಾಡಿಸಿಕೊಂಡು ಇದೀಗ ಬಿಡುಗಡೆಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಅಲ್ಲದೆ X ನಲ್ಲಿ ಅಪಘಾತದ ಸುದ್ದಿ ಪೋಸ್ಟ್ ಮಾಡುತ್ತಿದ್ದಂತೆ ಇದನ್ನು ನೋಡಿದ ಕೆಲವರು ಕಳವಳಗೊಂಡಿದ್ದಾರೆ. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: Hunsur: ಹಬ್ಬಕ್ಕೆ ತೆರಳುತ್ತಿದ್ದ ವ್ಯಕ್ತಿ ಬಸ್ ಚಕ್ರದಡಿ ಸಿಲುಕಿ ಸಾವು