Advertisement

Exam 810 ಹುದ್ದೆ ಭರ್ತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟ

12:13 AM Aug 17, 2024 | Team Udayavani |

ಬೆಂಗಳೂರು: ಗೆಜೆಟೆಡ್‌ ಪ್ರೊಬೇಶನರ್ (ಕೆಎಎಸ್‌) 384 ಹುದ್ದೆಗಳ ನೇಮಕದ ಪೂರ್ವಭಾವಿ ಪರೀಕ್ಷೆಯ ದಿನಾಂಕದ ಬಗ್ಗೆ ಅಪಸ್ವರ ಕೇಳಿ ಬಂದಿರುವ ಬೆನ್ನಲ್ಲೇ ವಿವಿಧ ಇಲಾಖೆಗಳಲ್ಲಿನ 800ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಪಡಿಸಿ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

Advertisement

ಈ ವರ್ಷದ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ಹುದ್ದೆಗಳಿಗೆ ಸಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗ ನಡೆಸಲಿದೆ. ಹೈದರಾಬಾದ್‌ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದ ಈ ಎರಡೂ ವೃಂದಗಳ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಗಳಲ್ಲಿನ 3 ಬಾಯ್ಲರ್‌ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಸೆ.18, ಅಂತರ್ಜಲ ನಿರ್ದೇಶನಾಲಯದಲ್ಲಿನ 10 ಭೂ ವಿಜ್ಞಾನಿಗಳ ಹುದ್ದೆಗಳಿಗೆ ಸೆ.19, ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ 10 ಹುದ್ದೆಗಳಿಗೆ ಸೆ. 26, ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ 7 ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಸೆ.27ರಂದು ಸ್ಪ³ರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ 24 ಹುದ್ದೆಗಳಿಗೆ ಅ. 5, ಬಿಬಿಎಂಪಿಯಲ್ಲಿನ 92 ಸಹಾಯಕ ಸಿವಿಲ್‌ ಎಂಜಿನಿಯರ್‌ ಹುದ್ದೆಗಳಿಗೆ ಅ. 6, ಅಂತರ್ಜಲ ನಿರ್ದೇಶನಾಲಯದಲ್ಲಿನ 15 ಭೂ ವಿಜ್ಞಾನಿ ಹುದ್ದೆಗಳಿಗೆ ಅ. 21, ಕಾರ್ಖಾನೆಗಳ ಸಹಾಯಕ ನಿರ್ದೇಶಕರ 2 ಹುದ್ದೆಗಳಿಗೆ ಅ. 22, ಸಹಾಯಕ ಭೂ ದಾಖಲೆಗಳ ನಿರ್ದೇಶಕರ 3 ಹುದ್ದೆಗಳಿಗೆ ಅ. 23, ಬಿಬಿಎಂಪಿ ಸಹಾಯಕ ಸಿವಿಲ್‌ ಎಂಜಿನಿಯರ್‌ 8 ಹುದ್ದೆಗಳಿಗೆ ಅ. 24, ಕೈಗಾರಿಕಾ ಇಲಾಖೆಯ 3 ಸಹಾಯಕ ನಿರ್ದೇಶಕರ ಹುದ್ದೆಗೆ ಅ. 25, ಜಲಸಂಪನ್ಮೂಲ ಇಲಾಖೆಯ 90 ಸಹಾಯಕ ಸಿವಿಲ್‌ ಎಂಜಿನಿಯರ್‌ ಹುದ್ದೆಗಳಿಗೆ ಅ. 26, ಆಯುಷ್‌ ಇಲಾಖೆಯ 1 ಪ್ರಾಧ್ಯಾಪಕ ಹುದ್ದೆಗೆ ಅ. 29 ಮತ್ತು ಅ. 30ಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರ 20 ಹುದ್ದೆಗಳಿಗೆ ನ. 10, ಪದವಿ ಪೂರ್ವ ವಿದ್ಯಾರ್ಹತೆಯ ವಿವಿಧ ಇಲಾಖೆಯಲ್ಲಿನ ವಿವಿಧ ಸಿ ಗ್ರೂಪ್‌ 313 ಹುದ್ದೆಗಳಿಗೆ ನ.13 ಮತ್ತು 14ರಂದು, 97 ಹುದ್ದೆಗಳಿಗೆ ನ. 21 ಮತ್ತು ನ. 22, ರಾಜ್ಯ ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ಲೆಕ್ಕ ನಿಯಂತ್ರಕರ 15 ಹುದ್ದೆಗಳಿಗೆ ಡಿ. 10 ಮತ್ತು ಡಿ. 13, 97 ಹುದ್ದೆಗಳಿಗೆ ಡಿ. 17 ಮತ್ತು 20ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಆಯೋಗದ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next