Advertisement

ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ: ಪ್ರಕರಣ ದಾಖಲು

07:34 AM Dec 05, 2020 | mahesh |

ಉಡುಪಿ: ಕೋವಿಡ್‌ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದ ಶಾಲೆಯೊಂದರ ಮುಖ್ಯೋಪಾಧ್ಯಾಯರು ಹಾಗೂ ಆಡಳಿತ ಮಂಡಳಿ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕೊರಂಗ್ರಪಾಡಿ ಪರಿಸರದಲ್ಲಿರುವ ಖಾಸಗಿ ಶಾಲೆಯಲ್ಲಿ ಆನ್‌ಲೈನ್‌ ತರಗತಿಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳನ್ನು ಶಾಲೆಗೆ ಕರೆಸಿ ಅವರಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಶಾಲೆಯಲ್ಲಿ ಹತ್ತನೇ ತರಗತಿಯ ಸುಮಾರು 20 ಮಂದಿ ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ. ಮಕ್ಕಳನ್ನು ಮೂರು ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ನಡೆಸಲಾಗುತ್ತಿತ್ತು. ಈ ಸಂದರ್ಭ ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಯ ಮೇಲೆ ಕ್ರಿಮಿನಲ್ ಕೇಸು ದಾಖಲಿಸುವಂತೆ ಪೊಲೀಸರಿಗೆ ತಹಶೀಲ್ದಾರ್‌ ಆದೇಶಿಸಿದ್ದು, ಕೇಸು ದಾಖಲಾಗಿದೆ. ವಿಚಾರಣೆ ವೇಳೆ ಶಾಲಾ ಮುಖ್ಯೋಪಾಧ್ಯಾಯಿನಿ ಪೋಷಕರ ಒತ್ತಡದ ಮೇರೆಗೆ ತರಗತಿ ನಡೆಸಿದ್ದಾಗಿ ತಿಳಿಸಿದ್ದಾರೆ ಎಂದು ತಹಶೀಲ್ದಾರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next