Advertisement

ಇಂದಿನಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆ

09:26 PM Mar 11, 2022 | Team Udayavani |

ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮಾ. 12ರಿಂದ 16ರ ವರೆಗೆ ಪರೀಕ್ಷೆ ನಡೆಯಲಿದೆ.

Advertisement

ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯವಾಗಿದ್ದು, ಅರೆತೋಳಿನ ಬಟ್ಟೆಗಳನ್ನು ತೊಡಬೇಕು ಮತ್ತು ಆಭರಣಗಳನ್ನು ಧರಿಸದಂತೆ ಕಡ್ಡಾಯ ಸೂಚನೆ ನೀಡಲಾಗಿದೆ.

ಮೊದಲ ದಿನ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳಿಗೆ ಸೂಚನೆ
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು. ಇದರ ಜತೆಗೆ ಪರೀûಾ ಕೊಠಡಿಗೆ ಅಭ್ಯರ್ಥಿಗಳು ಎಲೆಕ್ಟ್ರಾನಿಕ್‌ ವಸ್ತುಗಳು, ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು ಮತ್ತು ವೈಯಕ್ತಿಕ ವಸ್ತುಗಳನ್ನು ವ್ಯಾಲೆಟ್ , ಅಲಂಕಾರಿಕ ಕನ್ನಡಕ, ಬೆಲ್ಟ್ , ಟೋಪಿ, ಕೆಮರಾ ಹಾಗೂ ಆಭರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಇದನ್ನೂ ಓದಿ:ಗೋವಾ: ಸೋಮವಾರ ಸದನವನ್ನು ವಿಸರ್ಜಿಸಲು ನಿರ್ಧರಿಸಿದ ಸಾವಂತ್

Advertisement

ವಸ್ತ್ರ ಸಂಹಿತೆ ಕಡ್ಡಾಯ
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್‌, ಬ್ರಾಸ್‌ಲೆಟ್‌) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ಅರೆದೋಳಿನ ಅಂಗಿ, ಸಾದಾ ಪ್ಯಾಂಟ್‌ ಮತ್ತು ಚಪ್ಪಲಿಗಳನ್ನು ಮಾತ್ರ ತೊಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next