Advertisement

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ: ಕಟ್ಟುನಿಟ್ಟಾಗಿ ನಿಯಮ ಪಾಲನೆಗೆ ಸೂಚನೆ

08:41 PM Mar 09, 2022 | Team Udayavani |

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ಗಳ ನೇಮಕಾತಿಗೆ ಮಾ.12ರಿಂದ 16ರವರೆಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಸೂಚನೆ ನೀಡಿದ್ದಾರೆ.

Advertisement

ಬುಧವಾರ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಸಚಿವರು, ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಸೇರಿದಂತೆ ಯಾವುದೇ ರೀತಿಯಲ್ಲಿ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಒಂದು ವೇಳೆ ಪರೀಕ್ಷಾ ವ್ಯವಸ್ಥೆ ಹಾಳುಗೆಡವಿ ನೇಮಕಾತಿ ಪ್ರಕ್ರಿಯೆಗೆ ಕಳಂಕ ಬಂದರೆ, ಡಿಸಿ ಮತ್ತು ಎಸ್ಪಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

1,242 ಹುದ್ದೆಗಳಿಗೆ 33 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್‌ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ. 12 ಮತ್ತು 13ರಂದು 82 ಪರೀûಾ ಕೇಂದ್ರಗಳಲ್ಲಿ, 14ರಂದು 22, 15ರಂದು 24 ಮತ್ತು 16ರಂದು 8 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next