Advertisement

Exam; ಸೆ.23 – 24ರಂದು ಪಿಜಿ ಸಿಇಟಿ ಪರೀಕ್ಷೆ

06:21 PM Aug 30, 2023 | Team Udayavani |

ಬೆಂಗಳೂರು: ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 ಮತ್ತು 24ರಂದು ಪಿಜಿಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Advertisement

ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಬುಧವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಸೆ.23ರ ಶನಿವಾರ ಮಧ್ಯಾಹ್ನ 2.30ರಿಂದ 4.30ರವರೆಗೆ ಎಂ.ಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸುಗಳಿಗೆ, ಸೆ.24ರ ಭಾನುವಾರ ಬೆಳಿಗ್ಗೆ 10.30ರಿಂದ 12.30ರವರೆಗೆ ಎಂಸಿಎ ಕೋರ್ಸಿಗೆ ಮತ್ತು ಅಂದು ಮಧ್ಯಾಹ್ನ 2.30ರಿಂದ 4.30ರವರೆಗೆ ಎಂಬಿಎ ಕೋರ್ಸಿಗೆ ಈ ಪರೀಕ್ಷೆಗಳು ಗರಿಷ್ಠ 100 ಅಂಕಗಳಿಗೆ ನಡೆಯಲಿದೆ ಎಂದಿದ್ದಾರೆ.

ಈ ಮೊದಲು ಸೆಪ್ಟೆಂಬರ್ 9 ಮತ್ತು 10ರಂದು ಈ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಕೋರ್ಸುಗಳ ಅಂತಿಮ ಸೆಮಿಸ್ಟರ್‍‌ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್‌ //kea.kar.nic.in ನೋಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next