Advertisement

ದೇಹದ ಮೇಲಿನ ಮಚ್ಚೆ ಪರೀಕ್ಷಿಸಿಕೊಳ್ಳಿ

01:56 PM Oct 23, 2018 | |

ಕಲಬುರಗಿ: ದೇಹದ ಮೇಲಿನ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆ ಕುಷ್ಠರೋಗವಾಗಿರಬಹುದು. ಕುಷ್ಠರೋಗ ತಪಾಸಣಾ ತಂಡಗಳು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಯಾವುದೇ ಮುಚ್ಚು ಮರೆಯಿಲ್ಲದೇ ದೇಹದ ಮೇಲಿನ ಮಚ್ಚೆಗಳನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Advertisement

ತಾಜ್‌ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ಇಲಾಖೆ ಹಾಗೂ ವಿಶ್ವ ಸೇವಾ ಮಿಷನ್‌ಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಮನೆ ಮನೆ ಭೇಟಿ ಸಮೀಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾದ್ಯಂತ ಕುಷ್ಠರೋಗ ಪ್ರಕರಣಗಳ ಪತ್ತೆಗಾಗಿ ಅ. 22ರಿಂದ ನ. 4ರ ವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಒಬ್ಬ ಪುರುಷ ಮತ್ತು ಮಹಿಳಾ ಸದಸ್ಯರಿರುವ ಒಟ್ಟು 1941 ತಂಡಗಳನ್ನು ರಚಿಸಲಾಗಿದ್ದು, ತಂಡಗಳು ಜಿಲ್ಲೆಯ 5.43 ಲಕ್ಷ ಮನೆಗಳಿಗೆ
ಭೇಟಿ ನೀಡಿ ಕುಷ್ಠರೋಗ ಪ್ರಕರಣ ಪತ್ತೆ ಮಾಡಲಿವೆ. ಈ ತಂಡಗಳು ಕಡ್ಡಾಯವಾಗಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ಯಾವುದೇ ಕುಷ್ಠರೋಗ ಪ್ರಕರಣಗಳು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕುಷ್ಠರೋಗಿಗಳನ್ನು ಸಮಾಜದಿಂದ ತಿರಸ್ಕರಿಸಲಾಗುತ್ತಿದೆ. ಕುಷ್ಠರೋಗಕ್ಕೆ ಸೂಕ್ತ ಚಿಕಿತ್ಸೆ ಇದೆ. ಪ್ರಾರಂಭಿಕ ಹಂತದಲ್ಲಿ ರೋಗ ಪತ್ತೆಯಾದರೆ ರೋಗದಿಂದ ಉಂಟಾಗುವ ಅಂಗವಿಕಲತೆ ತಡೆಗಟ್ಟಬಹುದಾಗಿದೆ. ಕುಷ್ಠರೋಗ ಪ್ರಕರಣಗಳು ಹೆಚ್ಚಿಗೆ ಕಂಡುಬರುವ ಜಿಲ್ಲೆಗಳಲ್ಲಿ ಆಂದೋಲನ
ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಿಂಜರಿಕೆಯಿಂದ ಗುಪ್ತವಾಗಿರಿಸಿದ ಕುಷ್ಠರೋಗದ ಎಲ್ಲ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಲ್ಲಿ ಜಿಲ್ಲೆಯಲ್ಲಿ ಕುಷ್ಠರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ ಮಾತನಾಡಿ, ಕುಷ್ಠರೋಗವನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿದ್ದಲ್ಲಿ ಬೇರೆಯವರಿಗೆ ರೋಗ ತಗಲುವುದನ್ನು ತಡೆಗಟ್ಟಬಹುದು. ಕುಷ್ಠರೋಗ ಪತ್ತೆಗಾಗಿ ನಿಯೋಜಿಸಿರುವ ಪ್ರತಿ ತಂಡವು ಪ್ರತಿದಿನ ಕೇವಲ 20 ಮನೆಗಳಿಗೆ ಮಾತ್ರ ಭೇಟಿ ನೀಡಬೇಕಾಗಿದ್ದು, ಕುಟುಂಬದಲ್ಲಿರುವ ಎಲ್ಲ ಸದಸ್ಯರ ಮಾಹಿತಿ ಪಡೆದು ರೋಗ ಪತ್ತೆ ಹಚ್ಚಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಬೇಕು.
 
ಕುಷ್ಠರೋಗಕ್ಕೆ ಸಂಬಂಧಿಸಿದ ವೈದ್ಯಾಧಿಕಾರಿಗಳು ರೋಗಿಗಳನ್ನು ತಪಾಸಣೆ ಮಾಡಿದ ನಂತರ ಖಚಿತ ಪ್ರಕರಣ ಕಂಡು ಬಂದಲ್ಲಿ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಹದ ಮೇಲಿರುವ ಮಚ್ಚೆಯನ್ನು ತೋರಿಸುವ ಮೂಲಕ ಕುಷ್ಠರೋಗದಿಂದ ವಿಮುಕ್ತರಾಗಬೇಕು 
ಎಂದು ಹೇಳಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಾಧವರಾವ ಕೆ. ಪಾಟೀಲ ಮಾತನಾಡಿ, ಈ ಹಿಂದೆ ಕುಷ್ಠರೋಗವನ್ನು ಮಹಾ ಕಾಯಿಲೆ ಎಂದು ಕರೆಯಲಾಗುತ್ತಿತ್ತು. ಆ ಕಾಲದಲ್ಲಿ ರೋಗಕ್ಕೆ ಚಿಕಿತ್ಸೆ ಇರಲಿಲ್ಲ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕುಷ್ಠರೋಗ ನಿವಾರಣೆಗೆ ರಾಮಬಾಣದಂತಹ ಚಿಕಿತ್ಸೆ ಲಭ್ಯವಿದ್ದು, ಪ್ರಾರಂಭಿಕ ಹಂತದಲ್ಲಿ ಕುಷ್ಠರೋಗ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ರೋಗ ಹರಡುವುದನ್ನು ತಡೆಯಬಹುದಾಗಿದೆ. ಜಿಲ್ಲೆಯಲ್ಲಿ ಕುಷ್ಠರೋಗ ನಿಯಂತ್ರಣಕ್ಕಾಗಿ ವಿಶ್ವ ಸೇವಾ ಮಿಷನ್‌ ಹಾಗೂ ಮದರ್‌ ಥೇರೆಸಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸಂಸ್ಥೆಗಳು ಕುಷ್ಠರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಸಹಾಯ ಮಾಡುವರು ಎಂದು ಹೇಳಿದರು.

ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ| ಶರಣಬಸಪ್ಪ ಕ್ಯಾತನಾಳ, ತಾಲೂಕು ಆರೋಗ್ಯ ಅಧಿಕಾರಿ ಡಾ| ರಾಜಕುಮಾರ, ತಾಜನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವೇಣುಗೋಪಾಲ ದೇಶಪಾಂಡೆ, ಶಿವಾಜಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಎಸ್‌.ಎಂ. ಸಂಧ್ಯಾರಾಣಿ, ವಿಶ್ವ ಸೇವಾ ಮಿಷನ್‌ ಅಧ್ಯಕ್ಷ ವಿಶ್ವನಾಥ ಸ್ವಾಮಿ, ಮದರ್‌ ಥೇರೆಸಾ ಸಂಸ್ಥೆ ಪದಾಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಕಲಬುರಗಿ: ದೇಹದ ಮೇಲಿನ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆ ಕುಷ್ಠರೋಗವಾಗಿರಬಹುದು. ಕುಷ್ಠರೋಗ ತಪಾಸಣಾ ತಂಡಗಳು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಯಾವುದೇ ಮುಚ್ಚು ಮರೆಯಿಲ್ಲದೇ ದೇಹದ ಮೇಲಿನ ಮಚ್ಚೆಗಳನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾಜ್‌ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ಇಲಾಖೆ ಹಾಗೂ ವಿಶ್ವ ಸೇವಾ ಮಿಷನ್‌ಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಮನೆ ಮನೆ ಭೇಟಿ ಸಮೀಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾದ್ಯಂತ ಕುಷ್ಠರೋಗ ಪ್ರಕರಣಗಳ ಪತ್ತೆಗಾಗಿ ಅ. 22ರಿಂದ ನ. 4ರ ವರೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗ ಪ್ರಕರಣ ಪತ್ತೆ ಹಚ್ಚಲು ಒಬ್ಬ ಪುರುಷ ಮತ್ತು ಮಹಿಳಾ ಸದಸ್ಯರಿರುವ ಒಟ್ಟು 1941 ತಂಡಗಳನ್ನು ರಚಿಸಲಾಗಿದ್ದು, ತಂಡಗಳು ಜಿಲ್ಲೆಯ 5.43 ಲಕ್ಷ ಮನೆಗಳಿಗೆ
ಭೇಟಿ ನೀಡಿ ಕುಷ್ಠರೋಗ ಪ್ರಕರಣ ಪತ್ತೆ ಮಾಡಲಿವೆ. ಈ ತಂಡಗಳು ಕಡ್ಡಾಯವಾಗಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಮಾಹಿತಿ ಸಂಗ್ರಹಿಸಿ ಯಾವುದೇ ಕುಷ್ಠರೋಗ ಪ್ರಕರಣಗಳು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
 
ಕುಷ್ಠರೋಗಿಗಳನ್ನು ಸಮಾಜದಿಂದ ತಿರಸ್ಕರಿಸಲಾಗುತ್ತಿದೆ. ಕುಷ್ಠರೋಗಕ್ಕೆ ಸೂಕ್ತ ಚಿಕಿತ್ಸೆ ಇದೆ. ಪ್ರಾರಂಭಿಕ ಹಂತದಲ್ಲಿ ರೋಗ ಪತ್ತೆಯಾದರೆ ರೋಗದಿಂದ ಉಂಟಾಗುವ ಅಂಗವಿಕಲತೆ ತಡೆಗಟ್ಟಬಹುದಾಗಿದೆ. ಕುಷ್ಠರೋಗ ಪ್ರಕರಣಗಳು ಹೆಚ್ಚಿಗೆ ಕಂಡುಬರುವ ಜಿಲ್ಲೆಗಳಲ್ಲಿ ಆಂದೋಲನ
ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಿಂಜರಿಕೆಯಿಂದ ಗುಪ್ತವಾಗಿರಿಸಿದ ಕುಷ್ಠರೋಗದ ಎಲ್ಲ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಲ್ಲಿ ಜಿಲ್ಲೆಯಲ್ಲಿ ಕುಷ್ಠರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ ಮಾತನಾಡಿ, ಕುಷ್ಠರೋಗವನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿದ್ದಲ್ಲಿ ಬೇರೆಯವರಿಗೆ ರೋಗ ತಗಲುವುದನ್ನು ತಡೆಗಟ್ಟಬಹುದು. ಕುಷ್ಠರೋಗ ಪತ್ತೆಗಾಗಿ ನಿಯೋಜಿಸಿರುವ ಪ್ರತಿ ತಂಡವು ಪ್ರತಿದಿನ ಕೇವಲ 20 ಮನೆಗಳಿಗೆ ಮಾತ್ರ ಭೇಟಿ ನೀಡಬೇಕಾಗಿದ್ದು, ಕುಟುಂಬದಲ್ಲಿರುವ ಎಲ್ಲ ಸದಸ್ಯರ ಮಾಹಿತಿ ಪಡೆದು ರೋಗ ಪತ್ತೆ ಹಚ್ಚಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಬೇಕು.

ಕುಷ್ಠರೋಗಕ್ಕೆ ಸಂಬಂಧಿಸಿದ ವೈದ್ಯಾಧಿಕಾರಿಗಳು ರೋಗಿಗಳನ್ನು ತಪಾಸಣೆ ಮಾಡಿದ ನಂತರ ಖಚಿತ ಪ್ರಕರಣ ಕಂಡು ಬಂದಲ್ಲಿ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಹದ ಮೇಲಿರುವ ಮಚ್ಚೆಯನ್ನು ತೋರಿಸುವ ಮೂಲಕ ಕುಷ್ಠರೋಗದಿಂದ ವಿಮುಕ್ತರಾಗಬೇಕು
ಎಂದು ಹೇಳಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಾಧವರಾವ ಕೆ. ಪಾಟೀಲ ಮಾತನಾಡಿ, ಈ ಹಿಂದೆ ಕುಷ್ಠರೋಗವನ್ನು ಮಹಾ ಕಾಯಿಲೆ ಎಂದು ಕರೆಯಲಾಗುತ್ತಿತ್ತು. ಆ ಕಾಲದಲ್ಲಿ ರೋಗಕ್ಕೆ ಚಿಕಿತ್ಸೆ ಇರಲಿಲ್ಲ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕುಷ್ಠರೋಗ ನಿವಾರಣೆಗೆ ರಾಮಬಾಣದಂತಹ ಚಿಕಿತ್ಸೆ ಲಭ್ಯವಿದ್ದು, ಪ್ರಾರಂಭಿಕ ಹಂತದಲ್ಲಿ ಕುಷ್ಠರೋಗ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ರೋಗ ಹರಡುವುದನ್ನು ತಡೆಯಬಹುದಾಗಿದೆ. ಜಿಲ್ಲೆಯಲ್ಲಿ
ಕುಷ್ಠರೋಗ ನಿಯಂತ್ರಣಕ್ಕಾಗಿ ವಿಶ್ವ ಸೇವಾ ಮಿಷನ್‌ ಹಾಗೂ ಮದರ್‌ ಥೇರೆಸಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸಂಸ್ಥೆಗಳು ಕುಷ್ಠರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಸಹಾಯ ಮಾಡುವರು ಎಂದು ಹೇಳಿದರು.

ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ| ಶರಣಬಸಪ್ಪ ಕ್ಯಾತನಾಳ, ತಾಲೂಕು ಆರೋಗ್ಯ ಅಧಿಕಾರಿ ಡಾ| ರಾಜಕುಮಾರ, ತಾಜನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವೇಣುಗೋಪಾಲ ದೇಶಪಾಂಡೆ, ಶಿವಾಜಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಎಸ್‌.ಎಂ. ಸಂಧ್ಯಾರಾಣಿ, ವಿಶ್ವ ಸೇವಾ ಮಿಷನ್‌ ಅಧ್ಯಕ್ಷ ವಿಶ್ವನಾಥ ಸ್ವಾಮಿ, ಮದರ್‌ ಥೇರೆಸಾ ಸಂಸ್ಥೆ ಪದಾಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next