Advertisement

ಅಪಾಯ ಮಟ್ಟ ಮೀರಿದ ಕೃಷ್ಣೆ; ನಾಲ್ಕು ಸೇತುವೆ ಮುಳುಗಡೆ

05:50 PM Sep 17, 2021 | Team Udayavani |

ಚಿಕ್ಕೋಡಿ: ಮಹಾಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಕೃಷ್ಣಾ, ವೇದಗಂಗಾ, ದೂಧ್‌ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

Advertisement

105 ಟಿಎಂಸಿ ಸಾಮರ್ಥ್ಯದ ಕೋಯ್ನಾ ಜಲಾಶಯ ಭರ್ತಿಯಾಗಿದ್ದು, ಇದರಿಂದ ಕೃಷ್ಣಾ ನದಿಗೆ ಪ್ರತಿದಿನ 10 ಸಾವಿರ ಕ್ಯೂಸೆಕ್‌ದಂತೆ ನೀರು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದ ಕೋಯ್ನಾ-18 ಸಾವಿರ ಕ್ಯೂಸೆಕ್‌, ಕಣೇರ-2060 ಕ್ಯೂಸೆಕ್‌. ವಾರಣಾ-2351 ಕ್ಯೂಸೆಕ್‌
ಹೀಗೆ ವಿವಿಧ ಜಲಾಶಯಗಳಿಂದ ಸುಮಾರು 25 ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿದೆ.

ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿರುವುದರಿಂದ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿ
ಬಾರವಾಡ-ಕುನ್ನೂರ, ಕಾರದಗಾ-ಭೋಜ ಸೇತುವೆ ಮುಳುಗಡೆಗೊಂಡಿವೆ.

ಇದನ್ನೂ ಓದಿ:ನನ್ನ ಜೊತೆ ನೀನಿದ್ರೆ ಮಾತ್ರ ನಟಿಸುತ್ತೇನೆ ಅಂದಿದ್ದ ಶಂಕರ್ : ಉದಯವಾಣಿ ಜೊತೆ ‘ಅನಂತ’ಮಾತು

ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ ಮೂಲಕ ರಾಜ್ಯಕ್ಕೆ 90 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ನದಿಗೆ 15 ಸಾವಿರ ಕ್ಯೂಸೆಕ್‌ ಸೇರಿ ಒಟ್ಟು 1.05 ಲಕ್ಷ ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಹರಿದು ಬರಲಾರಂಭಿಸಿದೆ. ಇದರಿಂದ ನದಿಗಳ ನೀರಿನ ಮಟ್ಟದಲ್ಲಿ ದಿಢೀರ್‌ ಏರಿಕೆಯಾಗಿರುವುದರಿಂದ ನದಿ ತೀರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿದೆ.

Advertisement

ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಇರುವ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಶ್ರೀ ದತ್ತ ದೇವಸ್ಥಾನ, ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ನೀರು ನುಗ್ಗಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next