Advertisement

ಹೆದ್ದಾರಿ ಬಾರ್‌ ಸಮೀಕ್ಷೆಗೆ ಅಬಕಾರಿ ಆಯುಕ್ತರ ಸೂಚನೆ

03:45 AM Apr 04, 2017 | Team Udayavani |

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದಲ್ಲಿ ರಾಜ್ಯದಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಬಾರ್‌ಗಳ ಸಮೀಕ್ಷೆ ನಡೆಸುವಂತೆ ಅಬಕಾರಿ ಇಲಾಖೆ ಆಯುಕ್ತರು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Advertisement

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ 20 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ 220 ಮೀಟರ್‌ ಹೆದ್ದಾರಿಗಿಂತ ದೂರ ಹಾಗೂ 20 ಸಾವಿರಕ್ಕಿಂತ ಕಡಿಮೆ ಇರುವ ನಗರ ಪ್ರದೇಶಗಳಲ್ಲಿ 500 ಮೀಟರ್‌ ವ್ಯಾಪ್ತಿಯೊಳಗಿರುವ ಬಾರ್‌ಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶ ಮಾಡಿರುವುದರಿಂದ ರಾಜ್ಯದ ಹೆದ್ದಾರಿಗಳಲ್ಲಿ ಎಷ್ಟು ಬಾರ್‌ಗಳಿವೆ ಎನ್ನುವ ಕುರಿತು 10 ದಿನದಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಬಕಾರಿ ಇಲಾಖೆ ಆಯುಕ್ತ ಮಂಜುನಾಥ ನಾಯಕ್‌ ಎಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಹೆದ್ದಾರಿಯಲ್ಲಿರುವ ಬಾರ್‌ಗಳನ್ನು ತೆರವುಗೊಳಿಸಲು ಸೆಪ್ಟಂಬರ್‌ ವರೆಗೂ ರಾಜ್ಯದ ಬಾರ್‌ ಮಾಲಿಕರು ಸಮಯ ಕೇಳಿದ ಹಿನ್ನೆಲೆಯಲ್ಲಿ, ಸೆಪ್ಟಂಬರ್‌ ಅಂತ್ಯದವರೆಗೂ ಬಾರ್‌ ತೆರವುಗೊಳಿಸದಂತೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next