Advertisement

ಕರ್ನಾಟಕದಲ್ಲಿ 6000 ಕೋಟಿ ರೂ ಹೂಡಿಕೆಗೆ ಮುಂದೆ ಬಂದ ಎಕ್ಸೈಡ್ ಇಂಡಸ್ಟ್ರೀಸ್: ನಿರಾಣಿ

06:53 PM Mar 31, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ 6,000 ಕೋಟಿ ರೂ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದ್ದು, ಈ ಸಂಬಂಧ ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಚಕ್ರವರ್ತಿ ಹೇಳಿದರು.

ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.

ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ‌ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸಕ್ರಿಯವಾಗಿದ್ದು, ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

Advertisement

ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next