ಮುಂಬಯಿ : ಪಂಚ ರಾಜ್ಯ ಚುನಾವಣೆಗಳ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 146 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿತು.
ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 47.71 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 28,976.84 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.35 ಅಂಕಗಳ ಏರಿಕೆಯೊಂದಿಗೆ 8,940.35 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ನಾಳೆ ಶನಿವಾರ ಮಾರ್ಚ್ 11ರಂದು ಮತ ಎಣಿಕೆ ನಡೆಯಲಿದ್ದು ಶೇರು ಮಾರುಕಟ್ಟೆಯ ಹೂಡಿಕೆದಾರರು ಹಾಗೂ ವಹಿವಾಟುದಾರರು ಈಗಿನ್ನು ನೈಜ ಚುನಾವಣಾ ಫಲಿತಾಂಶಗಳನ್ನು ಎದುರು ನೋಡುತ್ತಿದ್ದಾರೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಒಎನ್‌ಜಿಸಿ, ಬಿಪಿಸಿಎಲ್, ಪವರ್ ಗ್ರಿಡ್ ಮತ್ತು ಗೇಲ್ ಶೇರುಗಳು ಕುಸಿದು ಟಾಪ್ ಲೂಸರ್‌ಗಳ ಪಟ್ಟಿಯಲ್ಲಿ ಮುಖ್ಯವಾಗಿ ಕಾಣಿಸಿಕೊಂಡವು.
ಇಂದಿನ ವಹಿವಾಟಿನಲ್ಲಿ ಈ ತನಕ 1,343 ಶೇರುಗಳು ಮುನ್ನಡೆ ಸಾಧಿಸಿದರೆ 676 ಶೇರುಗಳು ಹಿನ್ನಡೆಗೆ ಗುರಿಯಾಗಿವೆ. 133 ಶೇರುಗಳು ಯಾವುದೇ ಬದಲಾವಣೆ ಕಂಡಿಲ್ಲ.
ಹೀರೋ ಮೋಟೋ ಕಾರ್ಪ್, ಲಾರ್ಸನ್, ಅಲ್ಟ್ರಾ ಟೆಕ್ ಸಿಮೆಂಟ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಪ್ ಗೇನರ್ ಎನಿಸಿಕೊಂಡವು.