Advertisement

ಚುನಾವಣೆ ಸಮೀಕ್ಷೆಗಳು ಉಲ್ಟಾ ಆಗಲಿದೆ, ಉಪಚುನಾವಣೆಯಲ್ಲಿ ನಮ್ಮದೇ ಗೆಲುವು: ಸಿದ್ದರಾಮಯ್ಯ

02:16 PM Nov 08, 2020 | keerthan |

ಶಿವಮೊಗ್ಗ: ಶಿರಾ ಮತ್ತು ಆರ್. ಆರ್.ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಚುನಾವಣೆ ಸಮೀಕ್ಷೆಗಳು ಉಲ್ಟಾ ಆಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ಶಿರಾ ಮತ್ತು ಆರ್.ಆರ್. ನಗರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದರು.

ವಿನಯ್ ಕುಲಕರ್ಣಿ ವಿಚಾರದ ಬಗ್ಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ. ಸರ್ಕಾರಗಳು ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ಭಾರತದಲ್ಲಿ 2022ರವರೆಗೂ ಜನಸಾಮಾನ್ಯರಿಗೆ ಕೋವಿಡ್ ಲಸಿಕೆ ಸಿಗುವುದು ಅನುಮಾನ!

ರಾಜ್ಯದಲ್ಲಿ ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿದ ಅವರು, ನನಗೆ ಬಂದ ಮಾಹಿತಿಯಿಂದ ಹೇಳಿದ್ದೇನೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತದೆ. ರಾಜ್ಯ ಬಿಜೆಪಿಯಲ್ಲಿ 3 ಬಣಗಳಿವೆ. ಯಡಿಯೂರಪ್ಪ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದರು.

Advertisement

ಸಿಎಂ ಯಡಿಯೂರಪ್ಪ ಅವರು ಅಪರೇಷನ್ ಕಮಲದ ಜನಕ, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಿದ್ದಾರೆ. ಅಪರೇಷನ್ ಕಮಲದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next