ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ಪಿಯೂಷ್ ಗೋಯೆಲ್ ಹಾಗೂ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಜೇಟ್ಲಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಜಿಎಸ್‌ಟಿ ಅನುಷ್ಠಾನ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ತೆರಿಗೆ ಸಂಗ್ರಹಣೆ ಕುರಿತು ಅಂಕಿ-ಅಂಶಗಳ ಸಹಿತ ಮನವರಿಕೆ ಮಾಡಿಕೊಟ್ಟರು.
ಜಿಎಸ್‌ಟಿ ಜಾರಿಯಾಗುವ ಮುನ್ನ ರಾಜ್ಯ ಸರ್ಕಾರದ ವಾರ್ಷಿಕ ತೆರಿಗೆ ಸಂಗ್ರಹ ಪ್ರಮಾಣ ಏರುಗತಿಯಲ್ಲಿತ್ತು. “ವ್ಯಾಟ್’ ವ್ಯವಸ್ಥೆಯಿದ್ದಾಗ ರಾಜ್ಯ ಸರ್ಕಾರವು ತೆರಿಗೆ ಸಂಗ್ರಹದಲ್ಲಿ ಸರಾಸರಿ ಶೇ.10ರಿಂದ ಶೇ.12ರಷ್ಟು ವಾರ್ಷಿಕ ವೃದಿಟಛಿ ದರ ಹೊಂದಿತ್ತು. ಆದರೆ, ಜಿಎಸ್‌ಟಿ ವ್ಯವಸ್ಥೆ ಅಳವಡಿಸಿಕೊಂಡ ಬಳಿಕ ತೆರಿಗೆ ಸಂಗ್ರಹದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ರಾಜ್ಯ ಸರ್ಕಾರ ನಿರೀಕ್ಷಿಸಿದ್ದ ತೆರಿಗೆ ಸಂಗ್ರಹ ಪ್ರಮಾಣಕ್ಕಿಂತಲೂ ಶೇ.20ರಷ್ಟು ಕೊರತೆ ಕಂಡು ಬಂದಿದೆ. ಜಿಎಸ್‌ಟಿ ಅನುಷ್ಠಾನದಲ್ಲಿ ಕರ್ನಾಟಕ, ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ಹಾಗಿದ್ದರೂ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪರೋಕ್ಷ ತೆರಿಗೆ ಸಂಗ್ರಹವಾಗುತ್ತಿಲ್ಲ. ಪರಿಣಾಮವಾಗಿ ರಾಜ್ಯದ ನಾನಾ ಯೋಜನೆಗಳಿಗೆ ಅನುದಾನದ ಕೊರತೆ ತಲೆದೋರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುವ ಜಿಎಸ್‌ಟಿ ಪರಿಹಾರದ ನೆರವನ್ನು 2025ರವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ಪಿಯೂಷ್ ಗೋಯೆಲ್ ಭೇಟಿ: ಕೇಂದ್ರ ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ ಸಿಎಂ, ರಾಯಚೂರಿನ ಆರ್‌ಟಿಪಿಎಸ್, ಬಳ್ಳಾರಿಯ ಬಿಟಿಪಿಎಸ್ ಹಾಗೂ ಯರಮರಸ್‌ನ ವೈಟಿಪಿಎಸ್ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಹಂಚಿಕೆಗೆ ಕ್ರಮ ಕೈಗೊಳ್ಳಬೇಕು. ಆರ್‌ಟಿಪಿಎಸ್‌ನಲ್ಲಿ ಕಲ್ಲಿದ್ದಲು ಸಂಗ್ರಹ ಕಡಿಮೆಯಿರುವ ಹಿನ್ನೆಲೆಯಲ್ಲಿ ಕೂಡಲೇ ಕಲ್ಲಿದ್ದಲು ಪೂರೈಕೆಗೆ ವೆಸ್ಟರ್ನ್ ಕೋಲ್‌ಫಿಲ್ಡ್ ಲಿಮಿಟೆಡ್ ಹಾಗೂ ಕೋಲ್ ಇಂಡಿಯಾ ಲಿಮಿಟೆಡ್‌ಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಹಾಗೆಯೇ, ಹೈ-ಕ ಭಾಗದ ಅತಿ ಹಿಂದುಳಿದ ಬೀದರ್‌ನಿಂದ ನಾಂದೇಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸಬೇಕು. ಬೀದರ್- ಔರಾದ್- ದೀಗುಲ- ನಾಂದೇಡ್ ಮಾರ್ಗವಾಗಿ 154 ಕಿ.ಮೀ.ಉದ್ದದ ಹೊಸ ರೈಲು ಮಾರ್ಗ ಕುರಿತ ಸಮೀಕ್ಷಾ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಈ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಕೋರಿದರು.
ಸುರೇಶ್ ಪ್ರಭು ಭೇಟಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಿ, ರಾಜ್ಯದ ನಾನಾ ವಿಮಾನನಿಲ್ದಾಣಗಳ ಅಭಿವೃದಿಟಛಿ ಕುರಿತು ಚರ್ಚೆ ನಡೆಸಿದರು. ಕಲಬುರಗಿ ವಿಮಾನನಿಲ್ದಾಣದ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದು, ನಾನಾ ವಿಮಾನಯಾನ ಕಂಪನಿಗಳು ಕಾರ್ಯಾಚರಣೆ ಆರಂಭಿಸಲು ಆಸಕ್ತಿ ತೋರಿವೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಎಸ್‌ಪಿವಿ ರಚನೆಯಾಗು ವವರೆಗೆ ಕಾಯದೆ ಕೂಡಲೇ ಕಲಬುರಗಿ ವಿಮಾನನಿಲ್ದಾಣವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ನಿರ್ದೇಶನ ನೀಡುವಂತೆ ಕೋರಿದರು.
ಎಸ್‌ಪಿವಿ ಮೂಲಕ ರಾಜ್ಯ ಸರ್ಕಾರವು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಹಾಗೂ ಕಾರವಾರಗಳಲ್ಲಿ ವಿಮಾನ ನಿಲ್ದಾಣ ಅಭಿವೃದಿಟಛಿಪಡಿಸಲು ಉದ್ದೇಶಿಸಿದೆ. ಬೀದರ್ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡು ಕಾರ್ಯಾಚರಣೆಗೆ ಸಜ್ಜಾಗಿದ್ದು, ಜಿಎಚ್‌ಈಎಎಲ್‌ನೊಂದಿಗೆ ಒಪ್ಪಂದ ಅಂತಿಮ ಹಂತದಲ್ಲಿದೆ. ಶೀಘ್ರವೇ ಒಪ್ಪಂದಕ್ಕೆ ಸಹಿ ಮಾಡುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು. ಯಲಹಂಕದಲ್ಲಿರುವ ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರು ವಿಮಾನನಿಲ್ದಾಣಕ್ಕೆ ಸ್ಥಳಾಂತರಿಸಲು ಪ್ರಸ್ತಾವನೆ ಸಲ್ಲಿಸಿದೆ. ಪುಣೆ, ಶ್ರೀನಗರ, ಚಂಡೀಘಡ ವಿಮಾನನಿಲ್ದಾಣಗಳ ಮಾದರಿಯಲ್ಲಿ ಮೈಸೂರು ವಿಮಾನನಿಲ್ದಾಣವನ್ನೂ ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ನಾಗರಿಕ ಬಳಕೆ ಹಾಗೂ ಮಿಲಿಟರಿ ಬಳಕೆಗೆ ಅಗತ್ಯ ಸೌಲಭ್ಯ ಒದಗಿಸಲು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ
ವಿಮಾನ ನಿಲ್ದಾಣದ ಮೇಲಿನ ಒತ್ತಡ ತುಸು ಕಡಿಮೆಯಾಗಿದೆ. ಭಾರತೀಯ ವಾಯುಪಡೆಗೆ ಮೈಸೂರು ಮಾನನಿಲ್ದಾಣವನ್ನು
ವಾಯುಪಡೆಯ ಹೆಲಿಕಾಪ್ಟರ್ ಬೇಸ್‌ಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಬೇಕು
ಎಂದು ಮನವಿ ಮಾಡಿದರು.
ಕುಂಭಮೇಳಕ್ಕೆ ಆಹ್ವಾನ
ಉತ್ತರ ಪ್ರದೇಶದ ಆರೋಗ್ಯ ಸಚಿವ ಸಿದಾಟಛಿರ್ಥನಾಥ್ ಸಿಂಗ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ,
ಉತ್ತರಪ್ರದೇಶದಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.