Advertisement
ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ರೈತರು, ಸರ್ಕಾರ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿದರು.
Related Articles
Advertisement
ಕುಡಿವ ನೀರು ಪೂರೈಸಿ: ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಗ್ರಾಮೀಣ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ, ಅಗತ್ಯವಿರುವೆಡೆ ಬೋರ್‌ವೆಲ್ ಕೊರೆಸಲು ಅಧಿಕಾರಿಗಳು ಮುಂದಾಗಬೇಕೆಂದರು.
ಈಗಾಗಲೇ ಶಾಲೆಗಳು ಆರಂಭವಾಗಿದ್ದು ಖಾಸಗಿ ಶಿಕ್ಷಣ ಸಂಸ್ಥೆಗಳು ಅಧಿಕ ಡೊನೇಷನ್ ಪಡೆಯುತ್ತಿದ್ದು ಇದರಿಂದಾಗಿ ಬಡದವರು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವುದೇ ದುಸ್ತರವಾಗಿದೆ. ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದು ಪ್ರತಿ ಶಾಲೆಯಲ್ಲಿ ನಾಮಫಲಕದಲ್ಲಿ ಪಡೆಯುವ ಶುಲ್ಕದ ಮಾಹಿತಿ ಪ್ರಕಟಿಸುವಂತೆ ಒತ್ತಾಯಿಸಿದರು.
ತಾಲೂಕಿನ ಕುಂದನಕುಪ್ಪೆ ಹಾಗೂ ಹೊಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸ್ಥಳೀಯ ಗ್ರಾಪಂ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದು ಇನ್ನಿತರೆ ಬೇಡಿಕೆಗಳ ಸಂಬಂಧ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಪದಾಧಿಕಾರಿಗಳಾದ ಯರಗನಹಳ್ಳಿ ಮಹಾಲಿಂಗು, ಉಮೇಶ್, ಕುಮಾರ್, ಶೇಖರ್, ಶ್ರೀನಿವಾಸ್, ಮಹೇಶ್, ಕೃಷ್ಣ, ನಿಖೀಲ್, ರಂಜಿತ್ ಭಾಗವಹಿಸಿದ್ದರು.