ವಿಸ್ತರಣೆಯಾಗಬಹುದು ಎಂದು ಹೇಳಲಾಗಿದ್ದು, ಹೈಕಮಾಂಡ್‌ನಿಂದ ಸಚಿವರಾಗಲು ಕರೆ ಬರಬಹುದೆಂಬ ವಿಶ್ವಾಸದಲ್ಲಿ ಸಚಿವಾಕಾಂಕ್ಷಿಗಳು ಕಾದು ಕುಳಿತಿದ್ದಾರೆ.
Advertisement
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಐವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಂಪುಟ ವಿಸ್ತರಣೆಗೆ ಅಧಿಕೃತ ದಿನಾಂಕ ನಿಗದಿ ಮಾಡಬೇಕಿದೆ ಎಂದು ತಿಳಿದು ಬಂದಿದೆ.
Related Articles
Advertisement
ಅತೃಪ್ತ ಶಾಸಕರು ಈಗಲೂ ಸಂಪರ್ಕದಲ್ಲಿದ್ದು, ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ, ಜುಲೈ 15ರ ನಂತರ ಅತೃಪ್ತ ಶಾಸಕರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂಬ ಸಂದೇಶ ರವಾನಿಸಿದ್ದಾರೆಂದು ತಿಳಿದು ಬಂದಿದೆ.
ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ಎರಡು ಖಾತೆಗಳನ್ನು ಹೊಂದಿರುವ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ, ಯು.ಟಿ. ಖಾದರ್,ರಾಜಶೇಖರ ಪಾಟೀಲ್ ಹಾಗೂ ಜಯಮಾಲಾ ತಮ್ಮ ಬಳಿ ಹೆಚ್ಚುವರಿಯಾಗಿ ಹೊಂದಿರುವ ಖಾತೆಗಳನ್ನು ಬಿಟ್ಟುಕೊಡಬೇಕಾಗುತ್ತದೆ. ಈ ನಡುವೆ ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಪ್ರಕೃತಿ ಚಿಕಿತ್ಸೆ ಮುಗಿಸಿಕೊಂಡು ಬೆಂಗಳೂರಿಗೆ ಆಗಮಿಸಿರುವುದರಿಂದ, ಸಂಪುಟ ವಿಸ್ತರಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಪುಟ ವಿಸ್ತರಣೆ ಆದಷ್ಟು ಶೀಘ್ರವಾಗಿ ಆಗಬೇಕಿದೆ. ಎಂ.ಬಿ.ಪಾಟೀಲ್ ಸೇರಿ ಎಲ್ಲರ ಒತ್ತಾಯವೂ ಇದೇ ಆಗಿದೆ.ಇದರ ಬಗ್ಗೆ ಪಕ್ಷದ ನಾಯಕರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ.
– ಕೃಷ್ಣಬೈರೇಗೌಡ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ