Advertisement

ಇನ್ನೆರಡು ದಿನ ರಾಜ್ಯದಲ್ಲಿ ಉತ್ತಮ ಮಳೆ ನಿರೀಕ್ಷೆ

11:27 PM Aug 25, 2019 | Team Udayavani |

ಮಣಿಪಾಲ/ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದೆರಡು ದಿನ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ, ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಯಿತು. ಮಂಕಿಯಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 14 ಸೆಂ.ಮೀ. ಮಳೆ ಸುರಿಯಿತು. ಇದೇ ಅವಧಿಯಲ್ಲಿ ಹೊನ್ನಾವರದಲ್ಲಿ 13 ಸೆಂ.ಮೀ., ಶಿರಾಲಿ, ಕೋಟಾಗಳಲ್ಲಿ ತಲಾ 9 ಸೆಂ.ಮೀ., ಕುಂದಾಪುರ, ಭಟ್ಕಳಗಳಲ್ಲಿ ತಲಾ 7 ಸೆಂ.ಮೀ. ಮಳೆಯಾಯಿತು.

Advertisement

ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂ ಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಆರಂಭಿಸಿ ಒಂದೆರಡು ದಿನ ಮಂಗಳೂರಿನಿಂದ ಕಾರವಾರದ ತನಕ ತಾಸಿಗೆ 40ರಿಂದ 50 ಕಿ.ಮೀ.ವೇಗದಲ್ಲಿ ಬಲವಾದ ಗಾಳಿಯೂ ಬೀಸಲಿದ್ದು, ಅಬ್ಬರದಲೆಗಳು ಉಂಟಾಗುವುದು ಸಂಭವನೀಯ. ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next