Advertisement

ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ

11:01 PM Mar 08, 2020 | Lakshmi GovindaRaj |

ಬೆಂಗಳೂರು/ಮಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

Advertisement

ಕರಾವಳಿ ಮತ್ತು ದಕ್ಷಿಣ ಒಳನಾಡಿನಾದ್ಯಂತ ಹಾಗೂ ಉತ್ತರ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿತ್ತು. ಕಲಬುರಗಿ ಮತ್ತು ರಾಯಚೂರಿನಲ್ಲಿ ರಾಜ್ಯದಲ್ಲಿಯೇ ಗರಿಷ್ಠ 35 ಡಿ.ಸೆ.ಮತ್ತು ದಾವಣಗೆರೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 17 ಡಿ.ಸೆ. ತಾಪಮಾನ ದಾಖಲಾಯಿತು.

ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಂಭವವಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next