Advertisement
ಸಾಧನಾ ಸಮಾವೇಶದಲ್ಲಿ 490.97 ಕೋಟಿ ರೂ. ಅನುದಾನದ ಯೋಜನೆಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ 35 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದ್ದು, ಪಾರ್ಕಿಂಗ್, ಊಟದ ವ್ಯವಸ್ಥೆಗೆ ತಯಾರಿ ಸಾಗಿದೆ. ತ್ರಾಸಿಯಿಂದ ಬೈಕ್ ರ್ಯಾಲಿಯನ್ನೂ ಆಯೋಜಿಸಲಾಗಿದೆ. ಸಿಎಂ ಭೇಟಿಯಿಂದ ಕ್ಷೇತ್ರದ ಪ್ರಗತಿಗೆ ಇನ್ನಷ್ಟು ವೇಗ ದೊರೆಯಲಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಅಧಿಕಾರಕ್ಕೇರಿದ ಬಳಿಕ ಎರಡನೇ ಬಾರಿಗೆ ಬೈಂದೂರಿಗೆ ಆಗಮಿಸುತ್ತಿದ್ದಾರೆ. ಹಿಂದೆ ವಾರಾಹಿ ಯೋಜನೆ ಉದ್ಘಾಟನೆಗೆ ಅವರು ಆಗಮಿಸಿದ್ದರು. ಸದ್ಯ ಬೈಂದೂರು ತಾಲೂಕು ರಾಜ್ಯ ಪತ್ರದಲ್ಲಿ ಪ್ರಕಟಗೊಂಡಿದ್ದು ಭೇಟಿ ವೇಳೆ ಸಿಎಂ ತಾಲೂಕು ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಭಿವೃದ್ಧಿಯ ನಿರೀಕ್ಷೆಗಳು
ಉಳಿದ ಭಾಗಗಳಿಗೆ ಹೋಲಿಸಿದರೆ, ಬೈಂದೂರು ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಈ ಭಾಗದಲ್ಲಿ ಉದ್ದಿಮೆಗಳ ಸ್ಥಾಪನೆಗೆ ಅವಕಾಶಗಳಿಲ್ಲ. ಶಿಕ್ಷಣ ಸಂಸ್ಥೆಗಳ ಕೊರತೆಯೂ ಇದೆ. ಬೈಂದೂರು ತಾಲೂಕು ಘೋಷಣೆಯಾದ ಬಳಿಕ ಬೈಂದೂರು, ಯಡ್ತರೆ ಸೇರಿದಂತೆ ಪುರಸಭೆಯಾಗಿ ಮಾರ್ಪಡುತ್ತದೆ. ಅಭಿವೃದ್ಧಿ ದೃಷ್ಟಿಯಿಂದ ಹಲವು ಮಹತ್ವಾಕಾಂಕ್ಷೆಯ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕಿದೆ.
Related Articles
· ಒತ್ತಿನೆಣೆ, ಶಿರೂರು, ಮರವಂತೆ, ಆನೆಜರಿ, ಕೂಸಳ್ಳಿ ಮುಂತಾದ ಪ್ರವಾಸಿ ಸ್ಥಳಗಳ ಅಭಿವೃದ್ಧಿ
· ಬಹುಗ್ರಾಮ ಕುಡಿವ ನೀರಿನ ಯೋಜನೆ, ಶಿರೂರಿನ ಉಪ್ಪು ನೀರು ಸಂಸ್ಕರಣ ಘಟಕ ಕಾಮಗಾರಿಗೆ ಇನ್ನಷ್ಟು ವೇಗ ಅವಶ್ಯ.
Advertisement