Advertisement
ಇಂದು ಮಹಾರಾಷ್ಟ್ರ ರಾಜ್ಯದ ಗುಡ್ಡಾಪುರದ ದಾನಮ್ಮ ದೇವಿ ಕ್ಷೇತ್ರದಲ್ಲಿ ಮೊದಲ ಹಂತದ ಕಾಮಗಾರಿ ಕರ್ನಾಟಕ ಭವನ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
Related Articles
Advertisement
ಈಗಾಗಲೇ ಶ್ರೀಶೈಲ, ಅಯೋಧ್ಯ, ಪಂಡರಾಪುರ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಗುಡ್ಡಾಪುರ ಕ್ಷೇತ್ರದಲ್ಲಿ ರಾಜ್ಯದ ಭಕ್ತರಿಗೆ ಸೌಕರ್ಯ: ಕರ್ನಾಟಕ ರಾಜ್ಯದ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹರಾಷ್ಟ್ರದ ಶ್ರೀ ದಾನಮ್ಮದೇವಿ ಗುಡ್ಡಾಪುರದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇಂದು ಮೊದಲ ಹಂತದ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮ ನಡೆದಿದೆ. ಗುಡ್ಡಾಪುರಕ್ಕೆ ಕರ್ನಾಟಕ ರಾಜ್ಯದಿಂದ ಅಗಮಿಸುವಂತಹ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ದೇವಾಲಯದ ಹೆಸರಿನಲ್ಲಿರುವ 2 ಏಕರೆ ಜಮೀನನ್ನು ಖರೀದಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಕ್ತರಿಗೆ ವಿಶಾಲವಾದ ದಾಸೋಹ ಭವನ, ವಾಸ್ತವ್ಯಕ್ಕಾಗಿ ಭವನವನ್ನು ನಿರ್ಮಿಸಲಾಗುವುದು. ಇದು ಮೊದಲ ಹಂತದ ಕಾಮಗಾರಿಯಾಗಿದ್ದು, ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದದಲ್ಲಿ ಭಾಗವಹಿಸಿದ್ದ ಡಾ. ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಕರ್ನಾಟಕ ಸರಕಾರದ ವತಿಯಿಂದ ಮೊದಲ ಹಂತದಲ್ಲಿ 5 ಕೋಟಿ ರೂಪಾಯಿಗಳ ಅನುದಾನ ದೊರಕಿರುವುದು ಬಹಳ ಸಂತಸದ ವಿಷಯ. ಪ್ರಸಿದ್ದ ಪುಣ್ಯ ಕ್ಷೇತ್ರವಾದ ದಾನಮ್ಮ ದೇವಿ ಕ್ಷೇತ್ರ ಅಭಿವೃದ್ದಿಗೆ ಇನ್ನಷ್ಟು ಅನುದಾನ ಶಶಿಕಲಾ ಜೊಲ್ಲೆ ನೀಡಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಕೆಲಸಗಳು ಆಗಲಿ ಎಂದರು.