Advertisement

ಇನ್ನೂ 331 ಜನರ ವರದಿ ನಿರೀಕ್ಷೆ

06:05 AM Jun 07, 2020 | Team Udayavani |

ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಜಿಲ್ಲೆಯಲ್ಲಿ ಇನ್ನೂ 1818 ಜನರ ಗಂಟಲು ದ್ರವ ಮಾದರಿಯ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 153 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

Advertisement

ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ಆಸ್ಪತ್ರೆಯಲ್ಲಿ 111 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 14632 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 5093 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 1944 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 7484 ಜನರು 28 ದಿನಗಳ ಗೃಹ ನಿಗಾ ಅವ ಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13336 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12492 ಜನರ ವರದಿ ನಕಾರಾತ್ಮಕವಾಗಿದೆ. ಒಟ್ಟು 331 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next