Advertisement
ಪತ್ರಿಕಾಭವನದಲ್ಲಿ ಶುಕ್ರವಾರ ಮಾತನಾಡಿ, ಸಿಆರ್‌ಝಡ್ ವ್ಯಾಪ್ತಿಯ ಸಾಂಪ್ರದಾಯಿಕ ಮರಳುಗಾರಿಕೆಯಡಿ 142 ಮಂದಿಯ ಅರ್ಜಿ ಪರಿಶೀಲಿಸಲಾಗಿದ್ದು ಇತರ 52 ಮಂದಿಯ ಅರ್ಜಿ ಪರಿಶೀಲಿಸಲಾಗುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಅರ್ಹ ಗುತ್ತಿಗೆದಾರರಿಗೆ ಮರಳುಗಾರಿಕೆಗೆ ಆದೇಶ ಹೊರಡಿಸಲಾಗುವುದು ಎಂದರು.
Related Articles
Advertisement
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವತಿಯಿಂದ ನಡೆಯುವ ಪುರಾತನ, ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವನ್ನು ಬೆಳಗ್ಗಿನವರೆಗೆ ನಡೆಸಲು ಅನುಮತಿ ಕೋರಿದ್ದರು. ಆದರೆ, ರಾತ್ರಿ 10ರ ಬಳಿಕ ಕರ್ಕಶ ಶಬ್ದ ಬಳಸದಂತೆ ಸುಪ್ರಿಂಕೋರ್ಟ್, ಹೈಕೋರ್ಟ್ ಆದೇಶ ಹೊರಡಿಸಿದೆ. ಸರಕಾರ ಕೂಡ ಈ ನಿಟ್ಟಿನಲ್ಲಿ ನಿರ್ದೇಶನ ನೀಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಸಭೆ ನಡೆಸಿ ಯಕ್ಷಗಾನ ಕಾಲಮಿತಿಯನ್ನು ರಾತ್ರಿ 12 ಗಂಟೆಯವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದರು.
ಶಿರಾಡಿ ಘಾಟಿ; ಜ.15ರೊಳಗೆ ಗುಂಡಿ ಮುಚ್ಚಲು ನಿರ್ದೇಶನ:
ಸಂಚಾರ ಸಮಸ್ಯೆಗೆ ಕಾರಣವಾಗುತ್ತಿರುವ ಶಿರಾಡಿ ಘಾಟಿ ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಜತೆಗೆ ಸಭೆ ನಡೆಸಲಾಗಿದೆ. ಅಗತ್ಯವಿದ್ದರೆ ಮರ, ವಿದ್ಯುತ್ ಕಂಬ ತೆರವುಗೊಳಿಸಲು ಕೂಡ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಶಿರಾಡಿ ರಸ್ತೆಯ ಗುಂಡಿಯನ್ನು ಡಿ.20ರೊಳಗೆ ಮುಚ್ಚುವಂತೆ ತಿಳಿಸಲಾಗಿದೆ. ಆದರೆ ಅದು ಕಷ್ಯ ಸಾಧ್ಯ ಎಂದು ಅಧಿಕಾರಿಗಳು ತಿಳಿಸಿರುವುದರಿಂದ ಜ.15ರೊಳಗೆ ಸಂಪೂರ್ಣವಾಗಿ ಗುಂಡಿ ಮುಚ್ಚುವ ಕೆಲಸ ನಡೆಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದ್ದಾರೆ.