Advertisement
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಸಚಿವ ಸ್ಥಾನಕ್ಕಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲು ಬೇಡಿಕೆ ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸದಲ್ಲಿ ತೊಡಗಿರುವ ಅವರನ್ನು ಬಿಜೆಪಿ ಹೊರ ಹಾಕುವಂತೆ ಆಗ್ರಹಿಸಿದರು.
Related Articles
Advertisement
ಇದನ್ನೂ ಓದಿ:ಸಿಎಂಗೆ ರಾಜಕೀಯ ಬದ್ಧತೆಯಿದ್ದರೆ ಪಕ್ಷದ ಗೌರವ ಉಳಿಸಿಕೊಳ್ಳಲಿ: ಡಿಕೆ ಶಿವಕುಮಾರ್
ವಾಜಪೇಯಿ ಸಂಪುಟದಲ್ಲಿ ಸಚಿವನಾಗಿದ್ದೆ ಎಂದು ರಾಜಕೀಯ ಮುತ್ಸದ್ದಿ ನಾಯಕನ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿರುವ ಯತ್ನಾಳ ಅವರಿಗೆ ವಾಜಪೇಯಿ ಅವರ ಹೆಸರು ಹೇಳುವ ನೈತಿಕತೆ ಇಲ್ಲ. ಈ ಹಿಂದೆ ಕಾಂಗ್ರೆಸ್ ಸೇರಲು ಹೊರಟಿದ್ದ ಯತ್ನಾಳ, ಬಿಜೆಪಿ ಅಧಿಕೃತ ಅಭ್ಯರ್ಥಿ ಜಿ.ಎಸ್. ನ್ಯಾಮಗೌಡ ವಿರುದ್ಧ ಸ್ಪರ್ಧೆ ಮಾಡಿ ಸೋಲಿಸಿದರು. ನಿಮಗೆ ಟಿಕೆಟ್ ನೀಡಿದರೆ ಮಾತ್ರ ಪಕ್ಷ, ಇಲ್ಲದಿದ್ದರೆ ನಾಯಕರ ನಿಂದನೆ ಎಂಬ ವರ್ತನೆ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ಇದೇ ಯತ್ನಾಳ ಈ ಹಿಂದೆ ಬಸವಜಯ ಮೃತ್ಯುಂಜಯ ಶ್ರೀಗಳ ವಿರುದ್ಧವೂ ಮಾತನಾಡಿದ್ದರು. ಈಗ ಪಂಚಮಸಾಲಿ ಸಮಾಜದ ಪ್ರಶ್ನಾತೀತ ನಾಯಕ ಎಂಬಂತೆ ಬಿಂಬಿಸಿಕೊಳ್ಳಲು ಮುಂದಾಗಿದ್ದಾರೆ ಎಂದರು.
ಕಳೆದ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಯಡಿಯೂರಪ್ಪ ಪರ ಮಾತನಾಡಿದ್ದ ಯತ್ನಾಳ, ನಂತರ ಅವರನ್ನೇ ನಿಂದಿಸಲು ಆರಂಭಿಸಿದ್ದರು. ಸಮಾಜದ ಹೆಸರು ಹೇಳಿಕೊಂಡು ಸಚಿವರಾಗಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.