ಬೆಂಗಳೂರು: ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸುವ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಸಮರ ಸಾರಿದ್ದಾರೆ.
‘ರಾಜ್ಯಾಧ್ಯಕ್ಷ ಹುದ್ದೆಯಲ್ಲಿದ್ದ 75 ರ ಹರೆಯದ ಇಬ್ರಾಹಿಂ ಅವರು ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ದೇಶಾದ್ಯಂತ ಇರುವ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ. ನಮ್ಮ ಅಜೆಂಡಾ ಜಾತ್ಯತೀತಯ ಪರ ನಿಲ್ಲುವುದಾಗಿದೆ’ ಎಂದು ಹೇಳಿದ್ದಾರೆ.
‘ಗುಜರಾತ್, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ನಾಯಕರು, ರಾಜಸ್ಥಾನ ಮತ್ತು ದೇಶದಾದ್ಯಂತದ ರಾಜ್ಯಾಧ್ಯಕ್ಷರು ಇಲ್ಲಿಗೆ ಬರುತ್ತಿದ್ದಾರೆ ಎಂದು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಇಬ್ರಾಹಿಂ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸ್ವಾಗತಿಸಿ ಅವರನ್ನು ಬೆಂಬಲಿಸುತ್ತೇವೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಅವರ ಸೊಸೆ ಸೋನಿಯಾ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಿದ್ದರು ಮತ್ತು ಈಗ ಅವರ ಮೊಮ್ಮಗ ಇಲ್ಲಿಂದ ಸ್ಪರ್ಧಿಸಿದರೆ ಸ್ವಾಗತಿಸುತ್ತೇವೆ. ಅವರು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ಅವರನ್ನು ಬೆಂಬಲಿಸುತ್ತೇವೆ ಎಂದು ಇಬ್ರಾಹಿಂ ಹೇಳಿದರು.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಇವಿಎಂ ಹ್ಯಾಕಿಂಗ್‌ನಿಂದಾಗಿ ಬಿಜೆಪಿ ಗೆದ್ದಿದೆ ಎಂದು ಆರೋಪಿಸಿದ ಇಬ್ರಾಹಿಂ, ಭಾರತೀಯ ಚುನಾವಣಾ ಆಯೋಗವು ಬ್ಯಾಲೆಟ್ ಪೇಪರ್ ಬಳಸಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.