Advertisement
ಅವರು ರವಿವಾರ ನ್ಯಾಯಾಲಯ ಸಂಕೀರ್ಣದದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯ, ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿದ್ದ ಮೂಲಭೂತ ಕರ್ತವ್ಯಗಳು, ಸರ್ಕಾರಿ ನೌಕರರ ಜವಾಬ್ದಾರಿಗಳು, ದೈನಂದಿನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸರಕಾರಿ ನೌಕರರು ಎದುರಿಸಬೇಕಾದ ಸಮಸ್ಯೆಗಳು ಹಾಗೂ ಪರಿಹಾರ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾಲಕಾಲಕ್ಕೆ ನೀಡುವ ತರಬೇತಿಗಳಿಂದ ನೌಕರರಲ್ಲಿ ಕಾರ್ಯಕ್ಷಮತೆ ಹೆಚ್ಚಲಿದ್ದು, ಹೊಸ ಹೊಸ ವಿಚಾರಗಳನ್ನು ತಿಳಿಯಲು ಸಾಧ್ಯವಿದೆ. ಹೊಸದಾಗಿ ನೇಮಕಗೊಂಡ ನೌಕರರಿಗೆ ಉತ್ತಮ ತರಬೇತಿ ದೊರೆಯಲಿದೆ. ಸರಕಾರಿ ನೌಕರರು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು. ಅಶಿಸ್ತಿನೊಂದಿಗೆ ಯಾವುದೇ ಸಂದರ್ಭ ರಾಜಿ ಮಾಡಿಕೊಳ್ಳಬಾರದು ಎಂದು ತಿಳಿಸಿದರು. ಉಡುಪಿ ಜಿಲ್ಲೆ ಪ್ರಥಮ
ಜಿಲ್ಲೆಯಲ್ಲಿ ವಕೀಲರ ಸಂಘ ಮತ್ತು ನ್ಯಾಯಾಂಗ ಇಲಾಖೆ ನೌಕರರ ಉತ್ತಮ ಸಹಕಾರದಿಂದ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ. ಉಚ್ಚ ನ್ಯಾಯಾಲಯವು ಜಿಲ್ಲಾ ನ್ಯಾಯಾಲ ಯಗಳಿಗೆ ನಿಗದಿಗೊಳಿಸಿರುವ ಗುರಿ ಪ್ರಮಾಣ 10 ಆಗಿದ್ದು, ಉಡುಪಿಯಲ್ಲಿ 16 ಪ್ರಮಾಣದಲ್ಲಿ ಕಾರ್ಯ ಸಾಧನೆ ಯಾಗುತ್ತಿದೆ. ಜಿಲ್ಲೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜಡ್ಜ್ಮೆಂಟ್ ಅಫ್ ಲೋಡಿಂಗ್ ಹಾಗೂ ಅನ್ ಡೀಡ್ ಕೇಸ್‌ನಲ್ಲಿಯೂ ಸಹ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 13 ಜನ ನ್ಯಾಯಾಧೀಶರಿದ್ದು, 20 ಮಂದಿ ನಿರ್ವಹಿಸುವುವಷ್ಟು ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಡಿ.ವಿ. ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ವಿಜಯಲಕ್ಷಿ¾à ಉಪಸ್ಥಿತರಿದ್ದರು. ಶಿರಸ್ತೆದಾರ್ ಶಿವಪ್ಪ ಸ್ವಾಗತಿಸಿದರು.