Advertisement

ಸರ್ಕಾರಿ ಉದ್ಯೋಗ ಪಡೆಯಲು ಅನುಭವ ಕಡ್ಡಾಯ: ಗೋವಾ ಸರ್ಕಾರ

07:46 PM Nov 08, 2022 | Team Udayavani |

ಪಣಜಿ: ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕೆಂಬ ನಿಯಮವನ್ನು ಜಾರಿಗೆ ತರಲು ಗೋವಾ ಸರ್ಕಾರ ಮುಂದಾಗಿದೆ.

Advertisement

ಪಣಜಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, “ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಸರ್ಕಾರಿ ವಲಯದಲ್ಲಿ ತೊಡಗಿಸಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ,’ ಎಂದು ಹೇಳಿದರು.

“”ಇನ್ನು ಮುಂದೆ ನೇರ ಸರ್ಕಾರಿ ಉದ್ಯೋಗ ನೀಡುವುದಿಲ್ಲ. ಪದವಿ ಪಾಸಾಗುವ ಮೊದಲೇ ಅನೇಕರು ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಉದಾಹರಣೆಗಳಿವೆ. ಇನ್ನು ಇದಕ್ಕೆ ಅವಕಾಶ ಇಲ್ಲ. ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕಾಗುತ್ತದೆ,’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next