Advertisement
ಅವರು ಪೇರಾಲು ಸರಕಾರಿ ಕಿರಿಯ ಬುನಾದಿ ಶಾಲೆಯಲ್ಲಿ ನಡೆಯುತ್ತಿರುವ ಏಳು ದಿನಗಳ ಸ್ಕೌಟ್ ಅಧ್ಯಾಪಕರ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
Related Articles
Advertisement
ಶಿಬಿರದ ಅಂಗವಾಗಿ ಸ್ವತ: ತೆರವಾದ ಸ್ಥಳದಲ್ಲಿ ಅಡುಗೆ ಮಾಡಿ ಆಹಾರ ಸೇವನೆ, ಶಿಬಿರಾಗ್ನಿ ಇತ್ಯಾದಿ ಕಾರ್ಯಕ್ರಮಗಳಿರುತ್ತವೆ.ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಕೆ.ಆರಿಫ್, ಹಮೀದಾಲಿ, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯ ವಿ.ಪಿ. ಅಬ್ದುಲ್ ಖಾದರ್ ಹಾಜಿ, ಕಾಸರಗೋಡು ಉಪಜಿಲ್ಲಾ ವಿದ್ಯಾಧಿ ಕಾರಿ ಅಗಸ್ಟಿನ್ ಬರ್ನಾಡ್, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ಕೆ. ಮೊದಲಾದವರು ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಶುಭಹಾರೈಸಿರುವರು. ಸರ್ವ ಧರ್ಮ ಪ್ರಾರ್ಥನೆ ಹಾಗೂ ಧ್ವಜಾವರೋಹಣದೊಂದಿಗೆ ಶಿಬಿರ ಸಮಾರೋಪಗೊಂಡಿತು. ಶಿಬಿರದಲ್ಲಿ 32 ಅಧ್ಯಾಪಕ-ಅಧ್ಯಾಪಕಿಯರು
ಕಾಸರಗೋಡು ಮತ್ತು ಕಾಂಞಂಗಾಡು ಶಿಕ್ಷಣ ಜಿಲ್ಲೆಗಳ ವಿವಿಧ ಶಾಲೆಗಳಿಂದ ಆಗಮಿಸಿದ 32 ಮಂದಿ ಅಧ್ಯಾಪಕರು ಮತ್ತು ಅಧ್ಯಾಪಕಿಯರು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿ ವೈವಿಧ್ಯಮಯ ವಿಚಾರಗಳನ್ನು ಮನನ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲಾ ಸ್ಕೌಟು ವಿಭಾಗದ ಆಯುಕ್ತ ಗುರುಮೂರ್ತಿ ನಾಯ್ಕಪು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಏಳು ದಿನಗಳ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯುವುದಕ್ಕಾಗಿ ಕೂಡ್ಲು ಗೋಪಾಲಕೃಷ್ಣ ಪ್ರೌಢಶಾಲಾ ಸ್ಕೌಟು ಅಧ್ಯಾಪಕ ಕಿರಣ್ ಪ್ರಸಾದ್ ಪಿ.ಜಿ., ಮಧೂರು ಸರಕಾರಿ ಶಾಲಾ ಮುಖ್ಯ ಶಿಕ್ಷಕ ವಿನೋದ್ ಕುಮಾರ್, ಕಾಟುಕುಕ್ಕೆ ಶಾಲಾ ಅಧ್ಯಾಪಕ ವಿಜಯಕುಮಾರ್, ಕುಂಟಿಕಾನ ಶಾಲಾ ಅಧ್ಯಾಪಕ ಪ್ರಶಾಂತ್ ಕುಮಾರ್ ಕಾಲಿಚ್ಚಾನಡ್ಕ ಶಾಲಾ ಅಧ್ಯಾಪಕ ವಿ.ಕೆ ಭಾಸ್ಕರನ್ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ