Advertisement

ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಲಹೆ ಪಾಲನೆ; ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚನೆ

12:31 AM Nov 10, 2020 | mahesh |

ಉಡುಪಿ: ಜಿಲ್ಲೆಯಲ್ಲಿ 2ನೇ ಹಂತದ ಕೋವಿಡ್‌ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು, ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಕರೆ ನೀಡಿದರು.

Advertisement

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಗಳು ಗಣನೀ ಯವಾಗಿ ಕಡಿಮೆ ಯಾಗು ವುದರ ಜತೆಗೆ ಮರಣ ಪ್ರಮಾಣವು ಸಹ ಇಡೀ ರಾಜ್ಯದಲ್ಲೇ ಅತ್ಯಂತ ಕಡಿಮೆಯಾಗಿದೆ. ಸಾರ್ವಜನಿಕರು ಇದರಿಂದ ಮೈ ಮರೆಯದೆ ತಜ್ಞರು ಈಗಾಗಲೇ ಸಲಹೆ ನೀಡಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ತಪ್ಪದೇ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಸೇರಿದಂತೆ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದರು.

ವೈದ್ಯರಿಗೆ ಅಭಿನಂದನೆ
ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸರಕಾರಿ ಮತ್ತು ಖಾಸಗಿ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಇದಕ್ಕಾಗಿ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಜಿಲ್ಲೆಯನ್ನು ಕೋವಿಡ್‌ ಮುಕ್ತವಾಗಿಸಬೇಕು ಎಂದರು.
ಡಿಎಚ್‌ಒ ಡಾ| ಸುಧೀರ್‌ ಚಂದ್ರ ಸೂಡ, ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಡಾ| ಪ್ರಶಾಂತ ಭಟ್‌, ಡಾ| ಪ್ರೇಮಾನಂದ್‌ ಹಾಗೂ ತಜ್ಞರ ಸಮಿತಿಯ ವೈದ್ಯರು ಉಪಸ್ಥಿತರಿದ್ದರು.

ಹೊರರಾಜ್ಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ
ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಜಿಲ್ಲೆಗೆ ಹೊರರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಯಾವುದೇ ಸಭೆ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಜನ ಸೇರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರತರ ಕಾಯಿಲೆಗಳಿಗೆ ದಾಖಲಾಗುವ ರೋಗಿಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು
ಜಿಲ್ಲಾಧಿಕಾರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next