ಕಂಪ್ಲಿ: ಅಕ್ಷರ ಜ್ಞಾನದಿಂದ ಮಾತ್ರ ಶೋಷಣೆ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವೆಂದು ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಸಿ. ರಾಘವೇಂದ್ರ ಹೇಳಿದರು.
ದೇವಲಾಪುರ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದ ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಶಾಲೆ ಕಡೆ ನನ್ನ ನಡೆ ಕುರಿತ ಜಾಗೃತಿ ಆಂದೋಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಡಿ. ಮಹಾದೇವ ಮಾತನಾಡಿ, ದೇವಲಾಪುರದಲ್ಲಿ ಕಳೆದ ಸಾಲಿನಲ್ಲಿ ಏಳು ಬಾಲ್ಯ ವಿವಾಹ ತಡೆಗಟ್ಟಲಾಗಿದೆ.
ಶಾಲೆಯಿಂದ ಹೊರಗುಳಿದ 25 ಮಕ್ಕಳನ್ನು ಪುನಃ ಶೈಕ್ಷಣಿಕ ಮುಖ್ಯವಾಹಿನಿಗೆ ಕರೆತರಲಾಗಿದೆ. ಬಾಲ್ಯ ವಿವಾಹ ತಡೆಯುವ ಉದ್ದೇಶ, ಶಾಲೆ ಕಡೆ ನನ್ನ ನಡೆ ಜಾಗೃತಿ ಆಂದೋಲನದ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.
ವಕೀಲ ಕೆ. ಜಂಬಣ್ಣ ಬಾಲ್ಯ ವಿವಾಹ ಕುರಿತು ಮಾತನಾಡಿದರು. ಗ್ರಾಪಂ ಅಧ್ಯಕ್ಷ ಗೌಡ್ರು ಬುಡಗಣ್ಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂಉಪಾದ್ಯಕ್ಷೆ ಜಯಿನೂರು ಮಾರೆಮ್ಮ, ಪಿಡಿಒ ಶಿಲ್ಪರಾಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಭಾಕರ್, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ವಿ.ಜಿ. ಪರಮೇಶ್ವರರಾವ್, ಮಹಿಳಾ ಮೇಲ್ವಿಚಾರಕಿ ಲತೀಫಾಬೇಗಂ, ಎಸ್ ಡಿಎಂಸಿ ಪದಾಧಿಕಾರಿಗಳು, ಸಿಆರ್‌ಪಿ ವೀರೇಶಪ್ಪ, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.