Advertisement

ಸ್ಪೋಟದಿಂದ ಕುಸಿದ ಮೂರು ಮಹಡಿ ಕಟ್ಟಡ; ಐವರು ಸಾವು, ಹಲವರಿಗೆ ಗಾಯ!

09:21 AM Mar 04, 2022 | Team Udayavani |

ಭಾಗಲ್ಪುರ್: ಬಿಹಾರದ ಭಾಗಲ್ಪುರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ.

Advertisement

ಪೊಲೀಸರು ಮತ್ತು ತುರ್ತು ಸೇವೆಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಕುಸಿದ ಕಟ್ಟಡದ ಅವಶೇಷಗಳಡಿ ಹತ್ತರಿಂದ 15 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಮಾಯಗಂಜ್‌ನ ಜೆಎಲ್‌ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿರುವ ಜಿಲ್ಲೆಯ ಕಜ್ವಾಲಿಚಕ್ ಪ್ರದೇಶದ ಅನಾಥಾಶ್ರಮದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಪ್ರಬಲ ಸ್ಫೋಟದಲ್ಲಿ ಅಕ್ಕಪಕ್ಕದ ಎರಡರಿಂದ ಮೂರು ಮನೆಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ:ಕಾಣಿಯೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ನಾಶವಾದ ಕಟ್ಟಡದ ನಿವಾಸಿಗಳು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ. ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶಿ ನಿರ್ಮಿತ ಬಾಂಬ್‌ ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ.

Advertisement

ತನಿಖೆಯನ್ನು ಪ್ರಾರಂಭಿಸಲಾಗಿದೆ. ಫೋರೆನ್ಸಿಕ್ಸ್ ತಂಡವು ಘಟನಾ ಸ್ಥಳವನ್ನು ಪರೀಕ್ಷಿಸಿದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next