ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಜಮ್ಮುವಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ನರೇಂದ್ರ ಮೋದಿ ರ್ಯಾಲಿ ನಡೆಯಲಿರುವ ಸ್ಥಳದಿಂದ ಕೇವಲ 12 ಕಿ.ಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ.
ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಆರೋಪಿಗಳಿಗೆ ಜಾಮೀನು ಕೊಡಿಸಲು ಸರಕಾರಿ ಕಚೇರಿ ಸೀಲ್ ನಕಲು: 9 ಸೆರೆ
“ಇದು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ತೋರುತ್ತಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಮೋದಿ ಭೇಟಿ: ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬನಿಹಾಲ್- ಖಾಜಿಗುಂಡ್ ನಡುವೆ ಸರ್ವ ಋತುಗಳಲ್ಲೂ ಸಂಪರ್ಕ ಕಲ್ಪಿಸುವಂಥ ರಸ್ತೆ ಸುರಂಗದ ಲೋಕಾರ್ಪಣೆ ಸೇರಿದಂತೆ ಒಟ್ಟಾರೆ 20 ಸಾವಿರ ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ, ಉದ್ಘಾಟನೆಯನ್ನು ಮೋದಿ ನೆರವೇರಿಸುವರು